ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

2025 ಜನವರಿ 1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

On: August 22, 2024 7:08 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:22-08-2024

ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು 2025 ರ ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಸ್ತುತ 17 ವರ್ಷ ತುಂಬಿದ್ದು 18 ವರ್ಷಗಳಲ್ಲಿ ನಡೆಯುತ್ತಿದ್ದು ಬರುವ ಜನವರಿ 1 ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಬಹುದಾಗಿದೆ. ಹೊಸದಾಗಿ ನೊಂದಾಯಿಸಲು ನಮೂನೆ-6, ಹೆಸರು ಕೈಬಿಡಲು ನಮೂನೆ-7, ತಿದ್ದುಪಡಿ, ಸ್ಥಳಾಂತರ, ವಿಶೇಷ ಚೇತನರ ಗುರುತಿಸುವಿಕೆಗೆ ನಮೂನೆ-8, ವಿದೇಶದಲ್ಲಿ ನೆಲೆಸಿರುವ ಭಾರತೀಯವರು ನಮೂನೆ-6ಎ ರಡಿ ವಿವರವನ್ನು ಭರ್ತಿ ಮಾಡಿ ಮತದಾರರ ನೊಂದಣಾಧಿಕಾರಿಗಳಿಗೆ ನೀಡಬೇಕು.

ವೋಟರ್ ಹೆಲ್ಪ್ ಲೈನ್ ಆಪ್ ಅಥವಾ http;//voters.eci.gov.in/ ವೆಬ್‍ಸೈಟ್ ಮೂಲಕವೂ ನೊಂದಣಿ, ತಿದ್ದುಪಡಿ, ವರ್ಗಾವಣೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇದೆ. ದಾವಣಗೆರೆ ಮತ್ತು ಹೊನ್ನಾಳಿ ಉಪವಿಭಾಗಾಧಿಕಾರಿಗಳು, ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ಮತದಾರರ ನೊಂದಣಾಧಿಕಾರಿಗಳಾಗಿದ್ದು ಆಯಾ ತಾಲ್ಲೂಕಿನ ತಹಶೀಲ್ದಾರರು, ಪಾಲಿಕೆ ಪರಿಷತ್ ಕಾರ್ಯದರ್ಶಿ ಸಹಾಯಕ ಮತದಾರರ ನೊಂದಣಾಧಿಕಾರಿಗಳಾಗಿರುತ್ತಾರೆ.

ಸಂಪರ್ಕಿಸಬೇಕಾದ ತಹಶೀಲ್ದಾರರ ದೂರವಾಣಿ; ಜಗಳೂರು 9164687171, ದಾವಣಗೆರೆ 9108268759, ಹರಿಹರ 9880994147, ಪಾಲಿಕೆ ಕಂದಾಯಾಧಿಕಾರಿ 9901768584, ಪರಿಷತ್ ಕಾರ್ಯದರ್ಶಿ 7892012952, ಚನ್ನಗಿರಿ 9880383519, ಹೊನ್ನಾಳಿ 9480545472 ಮೊಬೈಲ್‍ಗೆ ಕರೆ ಮಾಡಬಹುದಾಗಿದೆ.

ಪರಿಷ್ಕರಣೆ ಅವಧಿ; ಮತದಾರರ ಪಟ್ಟಿಯ ಕರಡು ಪಟ್ಟಿಯನ್ನು 2024 ರ ಅಕ್ಟೋಬರ್ 29 ರಂದು ಪ್ರಕಟಿಸಲಾಗುತ್ತದೆ. ಆಕ್ಷೇಪಣೆಗಳಿದ್ದಲ್ಲಿ 2024 ರ ನವೆಂಬರ್ 28 ರೊಳಗಾಗಿ ಸಲ್ಲಿಸಬಹುದಾಗಿದೆ. ಈ ಅವಧಿಯಲ್ಲಿನ ಎರಡನೇ ಶನಿವಾರ, ಭಾನುವಾರ ರಜಾ ದಿನಗಳಂದು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಸಲ್ಲಿಕೆಯಾಗುವ ಎಲ್ಲಾ ಆಕ್ಷೇಪಣೆಗಳನ್ನು 2024 ರ ಡಿಸೆಂಬರ್ 24 ರೊಳಗಾಗಿ ಇತ್ಯರ್ಥ ಮಾಡಿ 2025 ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment