SUDDIKSHANA KANNADA NEWS/DAVANAGERE/DATE:23_12_2025
ದಾವಣಗೆರೆ: ವಿದ್ಯಾನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಡ್ರಗ್ಸ್ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮೂವರು ಪರಾರಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
READ ALSO THIS STORY: ಡ್ರಗ್ಸ್ ಕೇಸಲ್ಲಿ ದಾವಣಗೆರೆ ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಸೇರಿ ನಾಲ್ವರ ಬಂಧನ!
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕೇಸ್ ದಾಖಲಿಸಲಾಗಿದೆ. ಈ ಕೇಸ್ ನಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 200 ಗ್ರಾಂ ಒಪಿಎಂ, 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.
ವೇದಮೂರ್ತಿ, ರಾಮಸ್ವರೂಪ್, ದೊಲಾರಾಮ್, ದೇವಿಲಾಲ್ ನಾಲ್ವರನ್ನು ಬಂಧಿಸಲಾಗಿದೆ. ಮೂವರು ಪರಾರಿಯಾಗಿದ್ದು, ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಡ್ರಗ್ಸ್ ಅನ್ನು ಇಲ್ಲಿ ಮಾರಾಟ ಮಾಡಲು ತಂದಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ. ವೇದಮೂರ್ತಿ ತನ್ನ ಸ್ನೇಹಿತರಿಗೂ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎಂದು ಕಂಡು ಬಂದಿದೆ. ನಿನ್ನೆಯಷ್ಟೇ ಪ್ರಕರಣ ದಾಖಲಾಗಿದೆ. ಹಿನ್ನೆಲೆ ಗಮನಿಸಿದಾಗ ಕಾಂಗ್ರೆಸ್ ಮುಖಂಡರು ಇದ್ದಾರೆಂದು ಹೇಳುತ್ತಿದ್ದಾರೆ. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಾವು ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ, ಸೇವನೆ ಕುರಿತಂತೆ ಜಾಗೃತಿ ಮೂಡಿಸಿದ್ದೇವೆ. ಈ ಬಗ್ಗೆ ಮಾಹಿತಿ ನೀಡುವಂತೆ ಜನರಲ್ಲಿಯೂ ಕೇಳಿಕೊಂಡಿದ್ದೇವೆ. ಜಾಗೃತಿ ಕಾರ್ಯಕ್ರಮಗಳಲ್ಲಿ ನಡೆಸಿದ್ದೇವೆ. ಡ್ರಗ್ಸ್ ಕೇಸ್ ನಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಈ ಹಿಂದೆಯೂ ವೇದಮೂರ್ತಿ ವಿರುದ್ಧ ಇಂಥ ಆರೋಪಗಳು ಇರುವುದೂ ಸೇರಿದಂತೆ ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.





Leave a comment