ದಾವಣಗೆರೆ: ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಆನಗೋಡು ಗ್ರಾಮದಲ್ಲಿ ತಾಯಿ ಮತ್ತು ಮಕ್ಕಳು ಕಾಣೆಯಾಗಿರುವುದಾಗಿ ದೂರು ದಾಖಲಾಗಿದೆ.
ರಾಜು ಎಂಬುವವರ ಪತ್ನಿ ಅಂಬುಜ (26), ಮಕ್ಕಳಾದ ನಿಖಿಲ್ (8), ವರ್ಧನ (7) ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ.
ಚಹರೆ ವಿವರ: ನಿಖಿಲ್: 3 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ನೀಲಿ ಬಣ್ಣದ ಅಂಗಿ, ಖಾಕಿ ಬಣ್ಣದ ಚಡ್ಡಿ ಧರಿಸಿದ್ದಾನೆ.
ವರ್ಧನ: 2.5 ಅಡಿ ಎತ್ತರ, ದುಂಡುಮುಖ, ಎಣ್ಣೆಗೆಂಪು ಬಣ್ಣ ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ದೂ.ಸಂ: 08192-253100, 262555, 262550 ಸಂಪರ್ಕಿಸಲು ಠಾಣೆಯ ಸಬ್ ಇನ್ ಸ್ಪೆಕ್ಟರ್ ತಿಳಿಸಿದ್ದಾರೆ.





Leave a comment