SUDDIKSHANA KANNADA NEWS/DAVANAGERE/DATE:24_12_2025
ದಾವಣಗೆರೆ: ನಗರದ ಆರ್ ಎಂ ಸಿ ಮುಖ್ಯ ರಸ್ತೆಯ ಆನೆಕೊಂಡದಲ್ಲಿರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್‌ನ ಹಿಂಭಾಗದಲ್ಲಿರುವ ಸುಮಾರು 100 ಎಕರೆ ಪ್ರದೇಶದಲ್ಲಿ ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರಾಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪರ ಶಿವಗಣರಾಧಾನೆ ಹಾಗೂ ನುಡಿನಮನದ ಕಾರ್ಯಕ್ರಮವು ಡಿಸೆಂಬರ್ 26ರಂದು ಬೆಳಿಗ್ಗೆ 10. 15ರಿಂದ ನಡೆಯಲಿದೆ. ಸಿದ್ಧತೆಗಳು ಅಂತಿಮ ಹಂತಕ್ಕೆ ಬಂದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.
READ ALSO THIS STORY: ದಾವಣಗೆರೆಯಲ್ಲಿ ಡ್ರಗ್ಸ್ ಪೆಡ್ಲರ್ ಗಳಿಂದ ಖರೀದಿಸಿ ಎಷ್ಟು ಹಣಕ್ಕೆ ಮಾರಾಟ ಮಾಡ್ತಿದ್ದರು? ಶಾಮನೂರು ವೇದಮೂರ್ತಿ ಬಾಯ್ಬಿಟ್ಟ ಸ್ಫೋಟಕ ಮಾಹಿತಿ!
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಡೆಯುವ ಈ ಕಾರ್ಯಕ್ರಮಕ್ಕೆ ಮೂರು ವೇದಿಕೆಗಳನ್ನು ನಿರ್ಮಿಸಿದ್ದು, ಮುಖ್ಯ ವೇದಿಕೆಯಲ್ಲಿ ಪರಮಪೂಜ್ಯ ಗುರುಗಳು ಹಾಗೂ ಗಣ್ಯಾತಿಗಣ್ಯರು ಮತ್ತು ಮುಖ್ಯ ವೇದಿಕೆಯ ಬಲಭಾಗದ ವೇದಿಕೆಯಲ್ಲಿ ಹರ-ಗುರು-ಚರಮೂರ್ತಿಗಳು ಮತ್ತು ಎಡ ಭಾಗದ ವೇದಿಕೆಯಲ್ಲಿ ನಮ್ಮ ಕುಟುಂಬ ಸದಸ್ಯರು ಆಸೀನರಾಗುವರು. ಮುಖ್ಯ ವೇದಿಕೆ ಮುಂಭಾಗದಲ್ಲಿ ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸಾರ್ವಜನಿಕರಿಗೆ 25 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ. ಎಂದು ಮಾಹಿತಿ ನೀಡಿದರು.
ಮುಖ್ಯಾಂಶಗಳು
– ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ
-ಸಿಎಂ, ಡಿಸಿಎಂ ಸೇರಿ ಸಚಿವರು ಭಾಗಿ
– ಶಾಮನೂರು ಶಿವಶಂಕರಪ್ಪರ ನುಡಿನಮನ
– 50ರಿಂದ 60 ಸಾವಿರ ಜನರು ಭಾಗಿ
– 25 ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ
– ವಿಶಾಲ ಜಾಗದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ
ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಸ್ತರಿಗೂ ಒಂದೇ ಬಗೆಯ ಊಟದ ವ್ಯವಸ್ಥೆ ಇದ್ದು. ಸಾರ್ವಜನಿಕರಿಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ 90 ಊಟದ ಕೌಂಟರ್‌ಗಳನ್ನು ತೆರೆಯಲಾಗಿದೆ. ಗಣ್ಯಾತೀಗಣ್ಯರು ಮತ್ತು ಗಣ್ಯರಿಗೆ ಪ್ರತ್ಯೇಕವಾಗಿ
ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಪರಮಪೂಜ್ಯರಿಗೂ ಸಹ ದಾವಣಗೆರೆ ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನ, ಎಸ್. ನಿಜಲಿಂಗಪ್ಪ ಬಡಾವಣೆಯ ಶ್ರೀ ಗುರು-ಬಕ್ಕೇಶ್ವರ
ಕಲ್ಯಾಣ ಮಂಟಪ ಹಾಗೂ ಪಿ.ಬಿ.ರಸ್ತೆಯ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಉಡುಪ ಈವೆಂಟ್‌ಗೆ ಜವಾಬ್ದಾರಿ ನೀಡಲಾಗಿದೆ. ಸಮಾರಂಭದಲ್ಲಿ 50ರಿಂದ 60 ಸಾವಿರ ಜನರು ಪಾಲ್ಗೊಳ್ಳುವ
ನಿರೀಕ್ಷೆ ಇದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾರಿಗೂ ತೊಂದರೆ ಆಗಬಾರದೆಂದು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದು, ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಬೇತೂರು ರಸ್ತೆಯಿಂದ, ರಿಂಗ್ ರಸ್ತೆ ಮುಖಾಂತರ ಮತ್ತು ಬಸಾಪುರ ರಸ್ತೆಯಿಂದ ರಿಂಗ್ ರಸ್ತೆ ಮುಖಾಂತರ ಈ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಲು ಅನುವು ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ತಂದೆಯವರಾದ ಡಾ.ಶಾಮನೂರು ಶಿವಶಂಕರಪ್ಪನವರು ಡಿಸೆಂಬರ್ 14 ರಂದು ಶಿವಸಾಯುಜ್ಯರಾದ ಹಿನ್ನೆಲೆಯಲ್ಲಿ ನಮ್ಮ ಕುಟುಂಬದ ಸದಸ್ಯರ ತೀರ್ಮಾನದಂತೆ ಡಿಸೆಂಬರ್ 26 ರಂದು ಶಿವಗಣಾರಾಧನೆ ಮತ್ತು ನುಡಿನಮನ ಕಾರ್ಯಕ್ರಮವನ್ನು ದಾವಣಗೆರೆ ನಗರದ ಆರ್.ಎಂ.ಸಿ ಮುಖ್ಯರಸ್ತೆಯ ಆನೆಕೊಂಡದಲ್ಲಿರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ 10.15 ಗಂಟೆಗೆ ನಾಡಗೀತೆಯೊಂದಿಗೆ ಆರಂಭವಾಗಲಿದ್ದು, ವೇದಿಕೆ
ಮೇಲಿನ ಮಠಾಧೀಶರು, ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ತಂದೆಯವರಾದ ಡಾ.ಶಾಮನೂರು ಶಿವಶಂಕರಪ್ಪನವರ ಆತ್ಮಶಾಂತಿಗೆ 2 ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಗುವುದು ಎಂದು ಹೇಳಿದರು.
ವೇದಿಕೆಯ ದಿವ್ಯಸಾನಿಧ್ಯವನ್ನು ಸಿರಿಗೆರೆಯ ಶ್ರೀ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ, ಪಂಚಪೀಠಾಧೀಶರು ಸೇರಿದಂತೆ ನಾಡಿನ ವಿವಿಧ ಮಠಗಳ ಸುಮಾರು 70 ಸ್ವಾಮೀಜಿಗಳು ವಹಿಸಲಿದ್ದಾರೆ ಎಂದು ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ವಹಿಸುವ ಮಠಾಧೀಶರುಗಳು ಮತ್ತು ಗಣ್ಯ ಮಹನೀಯರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಿದ್ದು, ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ
ಜಸ್ಟಿಸ್ ಶಿವರಾಜ್ ಪಾಟೀಲ್ ಅವರು ವಹಿಸುವರು. ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಡಾ.ಶಾಮನೂರು ಶಿವಶಂಕರಪ್ಪನವರ ಪುತ್ಥಳಿಯನ್ನು ಅನಾವರಣ ಮಾಡಿ, ನುಡಿನಮನ ಸಲ್ಲಿಸುವರು. ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರು ತಂದೆಯವರ ಜೀವನ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿ, ನುಡಿನಮನ ಸಲ್ಲಿಸುವರು ಎಂದು ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಾ. ಶಾಮನೂರು ಶಿವಶಂಕರಪ್ಪನವರು ನಡೆದು ಬಂದ ದಾರಿಯ ‘ಅಮೃತ ಪುರುಷ’ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿ. ನುಡಿನಮನ ಸಲ್ಲಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2026ನೇ ವರ್ಷದ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿ. ನುಡಿನಮನ ಸಲ್ಲಿಸುವರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯ ಮಹನೀಯರು ನುಡಿನಮನ ಸಲ್ಲಿಸುವರು. ನಂತರ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವ ಮಠಾಧೀಶರರು ಆಶೀರ್ವಚನ ನೀಡಲಿದ್ದಾರೆ. ಇದೇ ವೇಳೆ ಡಾ. ಶಾಮನೂರು ಶಿವಶಂಕರಪ್ಪನವರ ಸಾಂಗತ್ಯ ಕುರಿತು ಅವರ ಮೊಮ್ಮಕ್ಕಳು ಮಾತನಾಡುವರು. ಬೆಂಗಳೂರಿನ ಶ್ರೀ ರವೀಂದ್ರ ಸೊರಗಾವಿ ಮತ್ತವರ ತಂಡದಿಂದ ವಚನ ಗಾಯನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಜಿ ಸಚಿವ ಪಿ. ಟಿ. ಪರಮೇಶ್ವರ ನಾಯ್ಕ್, ಡಾ. ಶಾಮನೂರು ಶಿವಶಂಕರಪ್ಪರ ಆಪ್ತರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ರೇಣುಕಾನಂದ, ನಂದಿಗಾವಿ ಶ್ರೀನಿವಾಸ್, ಬಿ. ಹೆಚ್. ವೀರಭದ್ರಪ್ಪ, ಕೆ. ಜಿ. ಶಿವಕುಮಾರ್, ದಿನೇಶ್ ಕೆ. ಶೆಟ್ಟಿ, ಆರ್. ಎಸ್. ವೀರಣ್ಣ ಮತ್ತಿತರರು ಹಾಜರಿದ್ದರು.
- Shamanuru Shivashankarappa
- Shamanuru Shivashankarappa Death
- Shamanuru Shivashankarappa Death news
- Shamanuru Shivashankarappa Mla
- Shamanuru Shivashankarappa News
- Shamanuru Shivashankarappa News Updates
- ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
- ಶಾಮನೂರು ಶಿವಶಂಕರಪ್ಪ
- ಶಾಮನೂರು ಶಿವಶಂಕರಪ್ಪ ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ
- ಶಾಮನೂರು ಶಿವಶಂಕರಪ್ಪ ಅಜರಾಮರ
- ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
- ಶಾಮನೂರು ಶಿವಶಂಕರಪ್ಪ ನೆನಪು ಮಾತ್ರ
- ಶಾಮನೂರು ಶಿವಶಂಕರಪ್ಪ ನ್ಯೂಸ್
- ಶಾಮನೂರು ಶಿವಶಂಕರಪ್ಪ ವಿಧಿವಶ





Leave a comment