SUDDIKSHANA KANNADA NEWS/DAVANAGERE/DATE:24_12_2025
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಆಯೋಜಿಸಲಾದ ಮಾಜಿ ಸಚಿವ ಹಾಗೂ ಮಹಾಸಭಾ ರಾಷ್ಟ್ರಾಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮವು ಹೃದಯ ಹೃದಯ ಸ್ಪರ್ಷಿಯಾಗಿ ನಡೆಯಿತು.
ಸರ್ವತ್ರ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ದಯಪಾಲಿಸಿದರು.
ಸುತ್ತೂರು ಪೂಜ್ಯರು, ಸಿದ್ದಗಂಗಾ ಶ್ರೀಗಳು ದರ್ಶನಾಶೀರ್ವಚನ ಕರುಣಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾದ ನೂತನ ರಾಜ್ಯಾಧ್ಯಕ್ಷ, ಸಚಿವ ಈಶ್ವರ್ ಖಂಡ್ರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಸೇರಿದಂತೆ ಅನೇಕ ಸಚಿವರು, 25ಕ್ಕಿಂತಲೂ ಹೆಚ್ಚು ಶಾಸಕರು, ಮಾಜಿ ಶಾಸಕರು, ಹಿರಿಯರಾದ ಪ್ರಭಾಕರ್ ಕೋರೆ, ಶಂಕರ್ ಬಿದರಿ ಸೇರಿದಂತೆ ಅನೇಕರು, ಸಾವಿರಾರು ಸಮಾಜ ಬಾಂಧವರು , ಡಾ. ಶಾಮನೂರು ಶಿವಶಂಕರಪ್ಪ ಅವರ ಸಮಾಜಮುಖಿ ಜೀವನವನ್ನು ಸ್ಮರಿಸಿದರು.





Leave a comment