ಚಿತ್ರದುರ್ಗ: ಚಿತ್ರದುರ್ಗ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಬೆಂಕಿಯಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವು ಘೋಷಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಖಾಸಗಿ ಸ್ಲೀಪರ್ ಬಸ್ಸೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ ಆರಂಭದಲ್ಲಿ ತೆಲಂಗಾಣದಲ್ಲಿಯೂ ಇದೇ ರೀತಿಯ ಅಪಘಾತ ವರದಿಯಾಗಿತ್ತು, ಇದರಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಜಲ್ಲಿ ತುಂಬಿದ ಟ್ರಕ್ಗೆ ಡಿಕ್ಕಿ ಹೊಡೆದು 20 ಜನರು ಸಾವನ್ನಪ್ಪಿದ್ದರು. ಹೈದರಾಬಾದ್ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಈ ಬಸ್ನಲ್ಲಿ 70 ಪ್ರಯಾಣಿಕರಿದ್ದರು ಎಂದು ವರದಿಯಾಗಿತ್ತು. ವಿಕಾರಾಬಾದ್ ಜಿಲ್ಲೆಯ ತಂದೂರ್ನಿಂದ ಹೈದರಾಬಾದ್ಗೆ ಪ್ರಯಾಣಿಸುತ್ತಿದ್ದಾಗ ನಿರ್ಮಾಣ ಸಾಮಗ್ರಿಗಳನ್ನು ತುಂಬಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ನಲ್ಲಿ ತುಂಬಿದ್ದ ಜಲ್ಲಿಕಲ್ಲು ಬಸ್ಗೆ ಬಿದ್ದು ಹಲವಾರು ಪ್ರಯಾಣಿಕರು ಸತ್ತು ಹೋಗಿದ್ದರು.





Leave a comment