SUDDIKSHANA KANNADA NEWS/DAVANAGERE/DATE:25_12_2025
ಬೆಂಗಳೂರು: ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿಕ್ಕಿ ಸಂಭವಿಸಿ ಬಸ್ ಗೆ ಬೆಂಕಿ ಹತ್ತಿಕೊಂಡು ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿರುವ ಸುದ್ದಿ ತಿಳಿದು ಮನಸ್ಸಿಗೆ ಆಘಾತವಾಗಿದೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಸಾವೀಗಿಡಾದ ಜೀವಗಳಿಗೆ ಭಗವಂತ ಶಾಂತಿ ಕರುಣಿಸಲಿ, ಅವರ ಕುಟುಂಬ ಹಾಗೂ ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಗಾಯಗೊಂಡ ಪ್ರಯಾಣಿಕರು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.





Leave a comment