ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಮರು ತನಿಖೆ ಕೋರಿದ ಅರ್ಜಿ ವಜಾ– ಹೈ ಕೋರ್ಟ್‌ ತೀರ್ಪು

On: August 30, 2024 6:27 PM
Follow Us:
---Advertisement---

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಈ ಮೂಲಕ ಸೌಜನ್ಯ ಪ್ರಕರಣದ ಮರು ತನಿಖೆಯ ಅವಕಾಶಗಳು ಕ್ಷೀಣಿಸಿದೆ. ಇದೆ ವೇಳೆ ಸಂತೋಷ್ ರಾವ್ ನಿರಪರಾಧಿ ಎಂಬ ಕೆಳ ನ್ಯಾಯಾಲಯದ ತೀರ್ಪನ್ನು ಹೈ ಕೋರ್ಟ್ ಕೂಡ ಎತ್ತಿ ಹಿಡಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಈ ಮೂಲಕ ಸೌಜನ್ಯ ಪ್ರಕರಣದ ಮರು ತನಿಖೆಯ ಅವಕಾಶಗಳು ಕ್ಷೀಣಿಸಿದೆ. ಇದೆ ವೇಳೆ ಸಂತೋಷ್ ರಾವ್ ನಿರಪರಾಧಿ ಎಂಬ ಕೆಳ ನ್ಯಾಯಾಲಯದ ತೀರ್ಪನ್ನು ಹೈ ಕೋರ್ಟ್ ಕೂಡ ಎತ್ತಿ ಹಿಡಿದಿದೆ.

ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶವನ್ನು ಆ 30 ರಂದು ನೀಡಿದೆ. ಈ ಮೂಲಕ ಸೌಜನ್ಯ ಕೊಲೆಗಾರ ಯಾರು ಎಂಬ ಪ್ರಶ್ನೆ ಹೈ ಕೋರ್ಟ್ ತೀರ್ಪಿನ ಬಳಿಕವು ಹಾಗೇ ಉಳಿದು ಕೊಂಡಿದೆ.

2012ರ ಅಕ್ಟೋಬರ್ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಎಂಬಾತನ ಬಂಧನ ಮಾಡಿದ್ದರು. ನಂತರ ಈ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದ್ದು, ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್ ರಾವ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್ ರಾವ್ ಅವರನ್ನು 2023ರ ಜೂನ್ 16ರಂದು ಖುಲಾಸೆಗೊಳಿಸಿತ್ತು .

ಸಿಬಿಐ ಕೋರ್ಟಿನ ತೀರ್ಪಿನ ಬಳಿಕ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಅರ್ಜಿ ಸಲ್ಲಿಸಿದ್ದರು . ಅದನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಜೊತೆಗೆ ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸಿ, ಸಂತೋಷ್ ರಾವ್ ನನ್ನೆ ಆರೋಪಿಯನ್ನಾಗಿ ಪರಿಗಣಿಸಬೇಕೇಂದು ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಕೂಡಾ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ಮಕ್ಕಳ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ಆರೋಪದ ಅಡಿ ಸಂತೋಷ್ ರಾವ್ ಅವರನ್ನು ದೋಷಿ ಎಂದು ಆದೇಶಿಸಬೇಕು ಎಂದು ಕೋರಿತ್ತು.

ವಿಚಾರಣಾಧೀನ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅದು ಕೂಡ ವಜಾಗೊಂಡಿದೆಇದರ ಜೊತೆಗೆ ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಕೂಡ ವಜಾ  ವಜಾಗೊಳಿಸಲಾಗಿದೆ.

Join WhatsApp

Join Now

Join Telegram

Join Now

Leave a Comment