ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜೆಡಿಎಸ್ ಕಾರ್ಯಾಧ್ಯಕ್ಷೆ ಎಂದು ಹೇಳಿ 8 ಜನರೊಂದಿಗೆ ಮದುವೆ, 38 ಕೋಟಿ ರೂ. ಪಂಗನಾಮ..!

On: August 31, 2024 1:51 PM
Follow Us:
---Advertisement---

ಉಡುಪಿ :  ಉಡುಪಿ ಮೂಲದ ಮಹಿಳೆಯೊಬ್ಬಳು ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ಕೋಟ್ಯಾಂತರ ರೂಪಾಯಿ  ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೆ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ. ಮದುವೆಯಾಗಿ ಹೆಂಡತಿ ಬಿಟ್ಟಿರುವ ಅಥವಾ ವಿಧುರ ಶ್ರೀಮಂತ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು. ಹೀನಾ ಎಂಟರ್‌ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‌ಷಿಪ್ ಕೊಡಿಸುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಳು. 18 ವರ್ಷದಿಂದ ಈ ವ್ಯವಹಾರ ಮಾಡಿಕೊಂಡಿದ್ದಳು. ಸ್ಪೀಕರ್‌ ಯು.ಟಿ. ಖಾದರ್ ಬಳಿ ಬ್ಲ್ಯಾಕ್‌ಮನಿ ಇದೆ. ಅದನ್ನ ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಜನರನ್ನು ನಂಬಿಸಿದ್ದಳು. 1 ಕೋಟಿ ರೂ. ಲೋನ್ ಬೇಕಾದರೆ 15 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದಳು.

10 ದಿನದಲ್ಲಿ ಲೋನ್ ಕೊಡಲಾಗುತ್ತೆ ಎಂದು ಭರವಸೆ ನೀಡಿ ವಂಚಿಸುತ್ತಿದ್ದಳು. ರಾಜ್ಯದಾದ್ಯಂತ 38 ಕೋಟಿ ರೂ.ಗೂ ಅಧಿಕ ಹಣ ಸಾವಿರಾರು ಜನರಿಗೆ ಮೋಸ ಮಾಡಿದ್ದಾಳೆ ಎಂಬುದು ತಿಳಿದು ಬಂದಿದೆ.ಈಕೆಯ ವಿರುದ್ಧ ತುಮಕೂರು, ಭದ್ರಾವತಿ, ಶಿವಮೊಗ್ಗ, ಮಂಗಳೂರು, ಉಡುಪಿ, ಮಣಿಪಾಲ, ಕಾಪು, ವಿಜಯನಗರ ಜಿಲ್ಲೆಯ ಹಡಗಲಿ, ಹೊಸಪೇಟೆ ಬಡಾವಣೆ ಹಾಗೂ ಶಹತ ಪೊಲೀಸ್​ ಠಾಣೆಯಲ್ಲಿ ಈಕೆಯ ವಿರುದ್ಧ ಚೆಕ್​ಬೌನ್ಸ್​ ಸೇರಿದಂತೆ ಅನೇಕ ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಲಾಯರ್ ಮೂಲಕ ದುಡ್ಡು ವಾಪಸ್ ಕೇಳುವವರಿಗೆ ಕೇಸ್ ದಾಖಲಿಸುವ ಭಯ ಹುಟ್ಟಿಸುತ್ತಿದ್ದಳು. ಚೆಕ್ ಬರೆಸಿಕೊಂಡು ಚೆಕ್‌ಬೌನ್ಸ್ ಕೇಸ್ ದಾಖಲಿಸುವ ಬೆದರಿಕೆಯನ್ನು ಹಾಕಿದ್ದಳು ಎಂದು ತಿಳಿದು ಬಂದಿದೆ. ಈಕೆಯ ವಂಚನೆಯ ವಿಚಾರ ತಿಳಿದ ಮೇಲೆ 6ನೇ ಗಂಡ ರಾಜಾಹುಸೇನ್ ಎಂಬಾತ ಮಹಿಳೆಯನ್ನು ಪ್ರಶ್ನಿಸಿದ್ದು, ಆತನ ಮೇಲೂ ಕೇಸ್ ದಾಖಲಿಸುವ ಬೆದರಿಕೆ ಹಾಕಿದ್ದಳು. ಎಂದು ತಿಳಿದು ಬಂದಿದೆ. ಮಹಿಳೆಯ ಮೇಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಂಚನೆ ಕೇಸ್ ದಾಖಲಾಗಿದೆ.

Join WhatsApp

Join Now

Join Telegram

Join Now

Leave a Comment