Home ಕ್ರೈಂ ನ್ಯೂಸ್ ಗುಂಡು ಹಾರಿಸಿ ಭಯೋತ್ಪಾದನೆ ನಡೆಸಿದ ಶಾಸಕರ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ? ಸಿಎಂ ಸಿದ್ದರಾಮಯ್ಯ?
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಗುಂಡು ಹಾರಿಸಿ ಭಯೋತ್ಪಾದನೆ ನಡೆಸಿದ ಶಾಸಕರ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ? ಸಿಎಂ ಸಿದ್ದರಾಮಯ್ಯ?

Share
Share

SUDDIKSHANA KANNADA NEWS/DAVANAGERE/DATE:04_01_2026

ಬೆಂಗಳೂರು: ಬಳ್ಳಾರಿಯಲ್ಲಿ ಕಾಂಗ್ರೆಸ್ ನಡೆಸಿದ ನಿರ್ಲಜ್ಜ ಗೂಂಡಾಗಿರಿ, ನಮ್ಮ ಪಕ್ಷದ ಶಾಸಕರ ಹಾಗೂ ಕಾರ್ಯಕರ್ತರ ಮೇಲಿನ ಹತ್ಯೆ ಪ್ರಯತ್ನ, ಹಲ್ಲೆ, ಕಾನೂನು ಸುವ್ಯವಸ್ಥೆಯ ಸಂಪೂರ್ಣ ಕುಸಿತ, ಓರ್ವನ ಪ್ರಾಣಹಾನಿಯ ಗಂಭೀರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕೇವಲ 1 ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಿರುವುದು, ತನ್ನ ಅಪ್ರಬುದ್ಧತೆ, ವೈಫಲ್ಯ ಮುಚ್ಚಿಕೊಳ್ಳಲು ನಡೆಸುತ್ತಿರುವ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ನಿಮ್ಮದೇ ಶಾಸಕರ ಪ್ರಚೋದನಾಕಾರಿ ನಡವಳಿಕೆ ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರ ಪುಂಡಾಟಿಕೆಯನ್ನು ನಿಯಂತ್ರಿಸುವ ಬದಲು, ಓರ್ವ ಅಧಿಕಾರಿಯನ್ನು ‘ಬಲಿಪಶು’ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಿಗೆ ಕನಿಷ್ಠ ಪರಿಸ್ಥಿತಿಯನ್ನು ಅವಲೋಕಿಸಲು ಕಾಲಾವಕಾಶವನ್ನೇ ನೀಡದೆ ಅಮಾನತು ಮಾಡಿರುವುದು ನಿಮ್ಮ ಆಡಳಿತದ ದಿವಾಳಿತನವನ್ನು ತೋರಿಸುತ್ತಿದೆ. ಸಾರ್ವಜನಿಕವಾಗಿ ಗುಂಡು ಹಾರಿಸಿ ಭಯೋತ್ಪಾದನೆ ನಡೆಸಿದ ಶಾಸಕರ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ? ಕೇವಲ ಅಧಿಕಾರಿಗಳ ತಲೆದಂಡದಿಂದ ಸತ್ಯವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಗುಂಡು ಹಾರಿಸಿದ್ದು ಯಾರು ಮತ್ತು ಯಾರ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂಬ ಸತ್ಯ ಹೊರಬರಲು, ನಿಮ್ಮ ಮುಲಾಜಿನಲ್ಲಿ ಇರುವ ತನಿಖೆಯಿಂದ ಸಾಧ್ಯವಿಲ್ಲ. ಸ್ವಲ್ಪವಾದರೂ ನೈತಿಕತೆ ಇದ್ದರೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಿಸಿ, ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಗೂಂಡಾ ವರ್ತನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ನಿಮ್ಮ ವೈಫಲ್ಯ ಮರೆಮಾಚಲು ಪ್ರಾಮಾಣಿಕ ಅಧಿಕಾರಿಗಳನ್ನು ಬಲಿಪಶು ಮಾಡುವ, ಅವರ ಸ್ಥೈರ್ಯ ಕುಗ್ಗಿಸುವ ಈ ಕೆಟ್ಟ ಕಾಂಗ್ರೆಸ್ ಪ್ರವೃತ್ತಿ ಈ ಕೂಡಲೇ ನಿಲ್ಲಲಿ ಎಂದು ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *