Home ದಾವಣಗೆರೆ ಮಾನ್ಯ ಮರ್ಯಾದಾಗೇಡು ಹತ್ಯೆ ಕೇಸ್ ತ್ವರಿತ ವಿಚಾರಣೆ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡ್ತೇವೆ: ಇಂಥ ಹೀನ ಕೃತ್ಯ ಸಹಿಸಲ್ಲ ಎಂದ್ರು ಸಿಎಂ ಸಿದ್ದರಾಮಯ್ಯ!
ದಾವಣಗೆರೆನವದೆಹಲಿಬೆಂಗಳೂರು

ಮಾನ್ಯ ಮರ್ಯಾದಾಗೇಡು ಹತ್ಯೆ ಕೇಸ್ ತ್ವರಿತ ವಿಚಾರಣೆ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡ್ತೇವೆ: ಇಂಥ ಹೀನ ಕೃತ್ಯ ಸಹಿಸಲ್ಲ ಎಂದ್ರು ಸಿಎಂ ಸಿದ್ದರಾಮಯ್ಯ!

Share
Share

SUDDIKSHANA KANNADA NEWS/DAVANAGERE/DATE:04_01_2026

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *