Home ದಾವಣಗೆರೆ ಸಿದ್ದರಾಮಯ್ಯರ ಬೆಂಬಲಿಗರಿಂದ ಯಾವ ಕ್ರಾಂತಿಯೂ ಆಗಲ್ಲ, ಹೈಕಮಾಂಡ್ ಹೇಳಿದಂತೆ ಆಗುತ್ತೆ: ಶಿವಗಂಗಾ ಬಸವರಾಜ್ ಟಾಂಗ್!
ದಾವಣಗೆರೆನವದೆಹಲಿಬೆಂಗಳೂರು

ಸಿದ್ದರಾಮಯ್ಯರ ಬೆಂಬಲಿಗರಿಂದ ಯಾವ ಕ್ರಾಂತಿಯೂ ಆಗಲ್ಲ, ಹೈಕಮಾಂಡ್ ಹೇಳಿದಂತೆ ಆಗುತ್ತೆ: ಶಿವಗಂಗಾ ಬಸವರಾಜ್ ಟಾಂಗ್!

Share
ಸಿದ್ದರಾಮಯ್ಯ
Share

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಬಲಿಗರು, ಆಪ್ತರು, ಅಭಿಮಾನಿಗಳಿಂದ ಯಾವ ಕ್ರಾಂತಿಯೂ ಆಗಲ್ಲ. ಹೈಕಮಾಂಡ್ ಹೇಳಿದಂತೆ ಆಗುತ್ತದೆ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ಟಾಂಗ್ ನೀಡಿದ್ದಾರೆ.

READ ALSO THIS STORY: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ “ಇಂಡಿಪೆಂಡೆಂಟ್” ಆಗಿ ಕಣಕ್ಕಿಳಿಯಲ್ಲ, “ಮತ್ತೇ…”?: ಜಿ. ಬಿ. ವಿನಯ್ ಕುಮಾರ್ ಸ್ಪೋಟಕ ಸಂದರ್ಶನ

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಕ್ರಾಂತಿ ಆಗುತ್ತದೆ ಎಂಬ ಮಾತಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಬಲಿಷ್ಠವಾಗಿದೆ. ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಿದ್ದೇವೆ. ದಿವಂಗತ ದೇವರಾಜ ಅರಸು ಅವರ ಹೆಸರಿನಲ್ಲಿದ್ದ ಅತಿ ಹೆಚ್ಚು ಕಾಲದವರೆಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಸಿದ್ದರಾಮಯ್ಯ ಅವರು ಮುರಿದಿದ್ದಾರೆ. ಇದಕ್ಕೆ ಅವರಿಗೆ ಶುಭಾಶಯ ಹೇಳುತ್ತೇನೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ನೋವಾದರೆ ನನಗೂ ನೋವಾಗುತ್ತದೆ. ನನಗೆ ಅವರೇ ಆರಾಧ್ಯ ದೈವ. ಇದರಲ್ಲಿ ಎರಡು ಮಾತಿಲ್ಲ. ಸಂಕ್ರಾಂತಿ ಬಳಿಕ ಸೂರ್ಯಪಥ ಬದಲಿಸುತ್ತಾನೆ. ಎಲ್ಲವೂ ಒಳ್ಳೆಯದಾಗಲಿದೆ. ಜನವರಿ ತಿಂಗಳ ಕೊನೆ ವಾರದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂಬ ವಿಶ್ವಾಸ ಇದೆ. ಈಗಲೇ ಏನನ್ನೂ ಮಾತನಾಡಲ್ಲ ಎಂದು ತಿಳಿಸಿದರು.

ಜನವರಿ ತಿಂಗಳ ಅಂತ್ಯದ ಬಳಿಕ ಡಿಸಿಎಂ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೋ ಇಲ್ಲವೋ ಎಂಬುದನ್ನು ನಿರ್ಧರಿಸುವುದು ಹೈಕಮಾಂಡ್. ಆ ಬಳಿಕ ನಾನು ಮಾತನಾಡುತ್ತೇನೆ. ಈಗಲೇ ಏನನ್ನೂ ಮಾತನಾಡಲು ಹೋಗಲ್ಲ.
ಪಕ್ಷದ ಆದೇಶ ಪಾಲಿಸುತ್ತೇವೆ ಎಂದು ಶಿವಗಂಗಾ ಬಸವರಾಜ್ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *