Home ಕ್ರೈಂ ನ್ಯೂಸ್ ಕಂಟ್ರೋಲ್ ಇರದ ಅವ್ನು ಯಾರ ಮಾತು ಕೇಳ್ತಿರಲಿಲ್ಲ: ಆಪ್ತ ಚಂದ್ರಶೇಖರ್ ಸಂಕೊಳ್ ನೆನೆದು ಕಣ್ಣೀರಿಟ್ಟ ಎಸ್. ಎ. ರವೀಂದ್ರನಾಥ್
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಕಂಟ್ರೋಲ್ ಇರದ ಅವ್ನು ಯಾರ ಮಾತು ಕೇಳ್ತಿರಲಿಲ್ಲ: ಆಪ್ತ ಚಂದ್ರಶೇಖರ್ ಸಂಕೊಳ್ ನೆನೆದು ಕಣ್ಣೀರಿಟ್ಟ ಎಸ್. ಎ. ರವೀಂದ್ರನಾಥ್

Share
ಎಸ್. ಎ. ರವೀಂದ್ರನಾಥ್
Share

ದಾವಣಗೆರೆ: ಶಾಮನೂರು ಗ್ರಾಮದ ಬಿಜೆಪಿ ಭೀಷ್ಮ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ್ ಸಂಕೊಳ್ ನಿಧನದ ಸುದ್ದಿ ಆಘಾತ ತಂದಿದೆ ಎಂದು ಮಾಜಿ ಸಚಿವ ಹಾಗೂ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್  ಅವರು ಆಪ್ತನ ನೆನದು ಕಣ್ಣೀರಿಟ್ಟ ಘಟನೆ ನಡೆದಿದೆ.

READ ALSO THIS STORY: EXCLUSIVE: ಶಾಸಕನಾಗಿ ಜನಸೇವೆ ಮಾಡ್ಬೇಕೆಂಬ ಕನಸು ಕಂಡಿದ್ದ ನೀರು ಕೊಟ್ಟ ಭಗೀರಥ ಚಂದ್ರಶೇಖರ್ ಸಂಕೊಳ್ ಸಾಲದ ಸುಳಿಗೆ ಸಿಲುಕಿದ್ದೇಗೆ? ಮಕ್ಕಳು ಆತ್ಮಹತ್ಯೆ ಯತ್ನ ಮಾಡಿದ್ಯಾಕೆ?

ಚಂದ್ರಶೇಖರ್ ಸಂಕೊಳ್ ಸಾವಿನ ಸುದ್ದಿ ತಿಳಿದ ತಕ್ಷಣ ಕುಟುಂಬಸ್ಥರಿಗೆ ಧೈರ್ಯ ತುಂಬಲು ಹೊರಟ ರವೀಂದ್ರನಾಥ್ ಅವರು ಮಾಧ್ಯಮದವರೊಂದಿಗೆ ಮಾತನಾಡುವಾಗ ಭಾವುಕರಾದರು.

ಚಂದ್ರಶೇಖರ್ ಸಂಕೊಳ್ ನನ್ನ ಸಂಬಂಧಿಕರು. ಕೆಲಸ ಚೆನ್ನಾಗಿ ಮಾಡುತ್ತಿದ್ದ. ಕಂಟ್ರೋಲ್ ಇರಲಿಲ್ಲ ಅವ್ನು ಎಂದು ಹೇಳಿದರು.

ಸಂಕೊಳ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ನನಗೂ ಬೆಳಿಗ್ಗೆ ಗೊತ್ತಾಗಿದೆ. ಏನಾಗಿದೆಯೋ ಏನೋ ಗೊತ್ತಿಲ್ಲ. ಜಗಳ ಆಡುತ್ತಿದ್ದ ಅಂತಾ ಹೇಳ್ತಿದ್ದಾರೆ. ಜನರಿಗಾಗಿ ಜನೋಪಯೋಗಿ ಕಾರ್ಯ ಮಾಡಿದ್ದ. ಆದರೆ ಉಪಯೋಗ ಮಾಡಿದ್ದರೂ ಅವನೇ ಇಲ್ಲವಲ್ಲ ಈಗ. ಯಾರೂ ಕರೆದರೆ ಮಾತನಾಡುತ್ತಿರಲಿಲ್ಲ. ಹಠವಾದಿಯಾಗಿದ್ದ ಎಂದು ರವೀಂದ್ರನಾಥ್ ಭಾವುಕರಾದರು.

ಚಂದ್ರಶೇಖರ್ ಸಂಕೊಳ್ ಅತ್ತೆ ಮಗ ಕರಿಬಸಣ್ಣ ಆಗಾಗ್ಗೆ ಸಮಸ್ಯೆ ಪರಿಹರಿಸಲು ಯತ್ನಿಸುತ್ತಿದ್ದರು. ಅವರ ಮಾತೂ ಕೇಳುತ್ತಿರಲಿಲ್ಲ. ಉದ್ದಟತನದಿಂದ ಮಾತನಾಡಿ ಹೋಗುತ್ತಿದ್ದ ಎಂದು ಕರಿಬಸಣ್ಣ ಹೇಳ್ತಿದ್ದಾನೆ. ಆತನ ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ ಎಂದು ಎಸ್. ಎ. ರವೀಂದ್ರನಾಥ್ ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.