Home ದಾವಣಗೆರೆ ಮಹಾತ್ಮ ಗಾಂಧಿ ಹೆಸರು ಕೇಳಿದರೆ ಮನುವಾದಿಗಳಿಗೆ ಅಲರ್ಜಿ, ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ವಿರಮಿಸಲ್ಲ: ಸಿಎಂ ಸಿದ್ದರಾಮಯ್ಯ ಪ್ರತಿಜ್ಞೆ!
ದಾವಣಗೆರೆನವದೆಹಲಿಬೆಂಗಳೂರು

ಮಹಾತ್ಮ ಗಾಂಧಿ ಹೆಸರು ಕೇಳಿದರೆ ಮನುವಾದಿಗಳಿಗೆ ಅಲರ್ಜಿ, ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ವಿರಮಿಸಲ್ಲ: ಸಿಎಂ ಸಿದ್ದರಾಮಯ್ಯ ಪ್ರತಿಜ್ಞೆ!

Share
Share

ಬೆಂಗಳೂರು: ಮನರೇಗಾ ಕಾಯ್ದೆ ಪುನರ್‌ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ “ಮನರೇಗಾ ಉಳಿಸಿ ಹೋರಾಟ”ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಮನರೇಗಾ ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ ಮನರೇಗಾ ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ
ಮನುವಾದಿಗಳಿಗೆ ಅಲರ್ಜಿ ಎಂದರು.

ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಮನರೇಗಾ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳಿಗೆ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ಇದು ದಶರಥ ರಾಮ, ಸೀತಾ ರಾಮ ಅಥವಾ ಕೌಸಲ್ಯಾ ರಾಮನಲ್ಲ, ಬದಲಿಗೆ ಮಹಾತ್ಮಾ ಗಾಂಧಿ ಕೊಂದ ನಾಥೂರಾಮ. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ. ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು, ಈಗ ಆ ಹಕ್ಕು ಸಹ ಇಲ್ಲ ಎಂದು ಹೇಳಿದರು.

ಈಗಿನ ಕಾಯ್ದೆಯಡಿ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು 40% ವೆಚ್ಚವನ್ನು ಭರಿಸಬೇಕಿದೆ. 2,500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಇದು ರಾಜ್ಯಗಳ ಮೇಲೆ ಹೇರಿಕೆ. ನಾವು ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದ್ದೇವೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು, ಆ ಕೆಲಸವನ್ನು ನಾವು ಮಾಡೋಣ ಎಂದು ಕರೆ ನೀಡಿದರು.

Share

Leave a comment

Leave a Reply

Your email address will not be published. Required fields are marked *