ದಾವಣಗೆರೆ: ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯ ವೇಳೆ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪ್ರಾಣಿ ಬಲಿ ನಿಷೇಧ : ಪ್ರಾಣಿಗಳ ಬಲಿಯನ್ನು ದೇವಸ್ಥಾನ ಮತ್ತು ದೇವಸ್ಥಾನದ ಸುತ್ತಮುತ್ತಲು ನಿಷೇಧಿಸಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಹಿಲಿಯಂ ಗ್ಯಾಸ್ ಬಲೂನ್ ಗಳು ನಿಷೇಧ, ದೇವಸ್ಥಾನದ ಸುತ್ತಮುತ್ತಲು ಮದ್ಯ ಮಾರಾಟ ನಿಷೇಧ, ಬೆತ್ತಲೆ ಮತ್ತು ಅರೆಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದೆ.
ನಿಷೇದಿತ ವಸ್ತುಗಳ ಪ್ರದರ್ಶನವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಮೀರಿ ನಿಷೇಧಿತ ಕಾರ್ಯಗಳನ್ನು ಮಾಡಿದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣವಾಗಿ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಫ್ವೆಕ್ಸ್ ಮತ್ತು ಬ್ಯಾನರ್ ಅಳವಡಿಕೆಗೆ ಕಡ್ಡಾಯವಾಗಿ ಅನುಮತಿಯನ್ನು ಪಡೆದು ಅಳವಡಿಸಬೇಕು ಇದಕ್ಕೆ ದೇವಸ್ಥಾನದ ಟ್ರಸ್ಟ್ ಸದಸ್ಯರುಗಳು ಸಹಕರಿಸಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖಾ ವತಿಯಿಂದ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶ್ರೀ ದುರ್ಗಾಂಭಿಕದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿದ್ದರು.





Leave a comment