Home ದಾವಣಗೆರೆ ಇಲ್ವೇ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ!
ದಾವಣಗೆರೆಬೆಂಗಳೂರು

ಇಲ್ವೇ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ!

Share
Share

ದಾವಣಗೆರೆ:(ಹರಿಹರ) ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಯಾರಿಗೂ ಯಾರದೇ ಭಯ ಇಲ್ಲ. ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.

ದಾವಣಗೆರೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ನಾಯಕ ಆವಾಜ್ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಪೊಲೀಸ್ ಠಾಣೆಗಳು ಕಲೆಕ್ಷನ್ ಸೆಂಟರ್‌ಗಳಾಗಿವೆ. ಯಾರ ಭಯ ಯಾರಿಗೂ ಇಲ್ಲ. ಕಾಂಗ್ರೆಸ್ ನಾಯಕರು ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಹೈಕಮಾಂಡ್ ಜೊತೆ ಮಾತನಾಡಿ ಶೀಘ್ರ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಮಾಡುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಕೆಲಸ ಮಾಡುತ್ತಿದ್ದಾರೆ, ಸಂಘಟನೆ ನಡೆಯುತ್ತಿದೆ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *