ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾನಾಗಲೀ, ನಮ್ಮ ಕುಟುಂಬದ ಸದಸ್ಯರಾರು ಸ್ಪರ್ಧೆ ಮಾಡಲ್ಲ. ಈ ಬಗ್ಗೆ ನಾವು ಚರ್ಚಿಸಿಯೂ ಇಲ್ಲ. ಆಲೋಚಿಸಿಯೂ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಸ್ಪಷ್ಟನೆ ನೀಡಿದ್ದಾರೆ.
READ ALSO THIS STORY: ಡಾ.ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನಮ್ಮ ಕುಟುಂಬದ ಸದಸ್ಯರು ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾಧ್ಯಮಗಳ ವದಂತಿ ತಳ್ಳಿ ಹಾಕಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಹಿಂದ ವರ್ಗದವರೇ ಹೆಚ್ಚಿದ್ದಾರೆ. ಅಹಿಂದ ವರ್ಗಕ್ಕೆ ಸೇರಿದ ನಾಯಕರೊಬ್ಬರಿಗೆ ಟಿಕೆಟ್ ನೀಡುವ ಕುರಿತಂತೆ ಚರ್ಚೆ ನಡೆಯುತ್ತಿದೆ. ಹಲವು ಮಂದಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದಾರೆ. ಎಲ್ಲರ ಅಭಿಪ್ರಾಯ ಆಲಿಸಲಾಗಿದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.





Leave a comment