Home ದಾವಣಗೆರೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ನೀಡಿ: ಮುಸ್ಲಿಂ ಸಮಾಜದ ಮಾಜಿ ಮೇಯರ್, ಕಾರ್ಪೊರೇಟರ್ಸ್ ಡಿಮ್ಯಾಂಡ್!
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ನೀಡಿ: ಮುಸ್ಲಿಂ ಸಮಾಜದ ಮಾಜಿ ಮೇಯರ್, ಕಾರ್ಪೊರೇಟರ್ಸ್ ಡಿಮ್ಯಾಂಡ್!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಅನ್ನು ದಿವಂಗತ ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ನೀಡಬೇಕು. ಇಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾವುದೇ ಕಾರಣಕ್ಕೂ ಬೇರೆಯವರಿಗೆ ಮಣೆ ಹಾಕಬಾರದು ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಮೇಯರ್, ಮಾಜಿ ಸದಸ್ಯರು ಒತ್ತಾಯಿಸಿದ್ದಾರೆ.

READ ALSO THIS STORY: BIG BREAKING: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಕೇಸಲ್ಲಿ ಬಂಧಿತರ ಸಂಖ್ಯೆ 11ಕ್ಕೇರಿಕೆ: ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವರಾಜ್ ಬಂಧನ!

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ ಕೆ. ಚಮನ್ ಸಾಬ್, ಮಾಜಿ ಸದಸ್ಯರಾದ ಎಂ. ಬಿ. ರಹೀಮ್ ಸಾಬ್, ಕೆ. ಜಾಕೀರ್ ಆಲಿ, ಶಫಿಕ್ ಪಂಡಿತ್, ಫಾರೂಕ್ ಸಾಬ್ ಅವರು, ಶಾಮನೂರು ಶಿವಶಂಕರಪ್ಪನವರ ಕುಟುಂಬಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದರು.

ಡಾ. ಶಾಮನೂರು ಶಿವಶಂಕರಪ್ಪನವರ ಸ್ಥಾನವನ್ನು ಅವರ ಕುಟುಂಬದವರೇ ಭರ್ತಿ ಮಾಡಲಿ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡಬೇಕು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನತೆಯಂತೂ ಅನಾಥರಾಗಿದ್ದಾರೆ ಎಂದರೆ ತಪ್ಪಾಗಲಾರದು. ಶಾಮನೂರು ಶಿವಶಂಕರಪ್ಪನವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ನಮ್ಮ ಸಮಾಜಕ್ಕೆ ಆಘಾತ ತಂದಿದೆ ಎಂದು ಹೇಳಿದರು.

ದಾವಣಗೆರೆಯಲ್ಲಿದ್ದಾಗ ಪ್ರತಿ ದಿನವು ಸಹ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಶಿವಶಂಕರಪ್ಪನವರ ನಿಧನದಿಂದ ಮತದಾರರಲ್ಲಿ ಅನಾಥ ಪ್ರಜ್ಞೆ ಮೂಡಿದಂತಾಗಿದೆ. ಎಸ್. ಎಸ್. ನಿಧನದಿಂದ ಇನ್ನು ಅವರ ಬೆಂಬಲಿಗರಾದ ನಮಗೆ ಇನ್ನು ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂತಹದರಲ್ಲಿ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಸಾಕಷ್ಟು ಜನ ಪೈಪೋಟಿಯಲ್ಲಿ ತೊಡಗಿದ್ದಾರೆ. ಆದರೆ ಯಾವುದೇ ಒಂದು ಶಾಸಕ ಸ್ಥಾನಕ್ಕೆ ಶಾಸಕರು ನಿಧನರಾಗಿ ಉಪ ಚುನಾವಣೆ ನಡೆದರೆ ಶಾಸಕರ ಕುಟುಂಬ ವರ್ಗಕ್ಕೆ ಮೊದಲ ಆದ್ಯತೆ ನಮ್ಮ ಕಾಂಗ್ರೆಸ್ ಪಕ್ಷ ಅಷ್ಟೇ ಅಲ್ಲ ಎಲ್ಲಾ ಪಕ್ಷಗಳಲ್ಲೂ ಇದೆ ಎಂದು ತಿಳಿಸಿದರು.

ಡಾ. ಶಾಮನೂರು ಶಿವಶಂಕರಪ್ಪನವರ ಕುಟುಂಬದ ಸದಸ್ಯರು ಎಂದೂ ಸಹ ಜಾತಿ ಬೇಧ ಭಾವ ಮಾಡದೇ ಎಲ್ಲರನ್ನೂ ಸಮಾನರಂತೆ ಕಾಣುತ್ತಾ ಬಂದಿದ್ದಾರೆ. ಕ್ಷೇತ್ರದ ಪ್ತಿ ಸದಸ್ಯರ ಕುಟುಂಬ ಕಷ್ಟಗಳಲ್ಲಿ ಭಾಗಿಯಾಗುವ ಶಾಮನೂರು ಕುಟುಂಬದವರು ಎಂದಿಗೂ ಸಹ ರಾಜಕೀಯ ಕಾರಣಕ್ಕೆ ದ್ವೇಷವನ್ನು ಹುಟ್ಟು ಹಾಕಿಲ್ಲ. ಇಂತಹ ಕುಟುಂಬದ ಸದಸ್ಯರು ನಮ್ಮ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ ಎಂಬುದೇ ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.

ಡಾ. ಶಾಮನೂರು ಶಿವಶಂಕರಪ್ಪನವರು ಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿಯನ್ನಾಗಿ ಮಾಡಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿ ಆಗಲು ಶಾಮನೂರು ಶಿವಶಂಕರಪ್ಪನವರ ಕುಟುಂಬದವರಿಂದ ಮಾತ್ರ ಸಾಧ್ಯ ಎಂಬುದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮನಗಾಣಬೇಕು. ಶಾಮನೂರು ಶಿವಶಂಕರಪ್ಪನವರ ಕುಟುಂಬದವರಿಗೆ ಉಪ ಚುನಾವಣೆಯಲ್ಲಿ ಅವಕಾಶ ಕಲ್ಪಿಸುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಸಹ ನಾವು ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ ಎಂದು ಮುಖಂಡರು ಹೇಳಿದರು.

ಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಉದಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಮಿವುಲ್ಲಾ, ಅನಸ್ ಅಲಿ, ಅಬ್ದುಲ್ ಗನಿ ಮತ್ತಿತರರು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *