ಬೆಂಗಳೂರು: ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ನಡೆಸುತ್ತಿದೆ ಎಂದು ಹೇಳಿದರು.
ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಎಲ್ಲರಿಗೂ ಕಾನೂನು ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರು ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.





Leave a comment