ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಭ್ರಷ್ಟಾಚಾರ, ಅವ್ಯವಹಾರ, ಕಾನೂನು ಉಲ್ಲಂಘನೆ ಪ್ರಶ್ನೆ ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ನನ್ನ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದ್ದರಿಂದ ಮನೆಯಲ್ಲಿಯೇ ಇದ್ದೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ಅಟ್ರಾಸಿಟಿ ಕೇಸ್ ದಾಖಲಾಗಿದ್ದರಿಂದ ಸಾರ್ವಜನಿಕವಾಗಿ ಓಡಾಡಬಾರದು. ಕಾನೂನಿಗೆ ಗೌರವ ಕೊಟ್ಟು ಹೊರಗಡೆ ಬಂದಿಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಸ್ಪಷ್ಟನೆ ನೀಡಿದರು.
ಈ ಸುದ್ದಿಯನ್ನೂ ಓದಿ: BIG BREAKING: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಕೇಸಲ್ಲಿ ಬಂಧಿತರ ಸಂಖ್ಯೆ 11ಕ್ಕೇರಿಕೆ: ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವರಾಜ್ ಬಂಧನ!
ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರ ಕಾಂಗ್ರೆಸ್ ಮುಖಂಡರು ನಾನು ಅಭಿವೃದ್ಧಿ ಮಾಡುವುದನ್ನು ಬಿಟ್ಟು ಓಡಿ ಹೋಗಿದ್ದೇನೆಂಬ ಆರೋಪ ಮಾಡಿದ್ದಾರೆ. ಇದು ಶುದ್ಧ ಸುಳ್ಳು. ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೂ ಒಂದೇ ಕಾನೂನು. ಕಾನೂನಿಗೆ ಗೌರವ ನೀಡಿ ಆಚೆ ಬಂದಿರಲಿಲ್ಲ ಎಂದು ತಿಳಿಸಿದರು.
ಕಾಡಜ್ಜಿಯ ಕೃಷಿ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಹೊಡೆಯಲಾಗಿದೆ. ನಾನು ಸ್ಥಳಕ್ಕೆ ಹೋದಾಗ ಲಾರಿಗಳು ಇದ್ದವು. ಕೆಲವು ವ್ಯಕ್ತಿಗಳು ಇದ್ದರು. ನಾನು ಕೃಷಿ ಇಲಾಖೆಗೆ ಹೋಗಿದ್ದೆ. ನನ್ನ ಜೊತೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ದಾವಣಗೆರೆ ಗ್ರಾಮಾಂತರ ಪೊಲೀಸರು ಬಂದಿದ್ದರು. ಆದರೂ ಉಸ್ತುವಾರಿ ಸಚಿವ ಚೇಲಾಗಳು ಬಂದು ಗಲಾಟೆ ಎಬ್ಬಿಸಿದರು. ನಾನು ತಡೆ ಹಿಡಿದ ಲಾರಿಗಳು, ಕಾರುಗಳಲ್ಲಿ ಬಂದಿದ್ದ ವ್ಯಕ್ತಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಲ್ಲ. ನನ್ನ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ. ಕಾಂತರಾಜ್ ಎಂಬ ವ್ಯಕ್ತಿ ಸ್ಥಳದಲ್ಲಿಯೇ ಇರಲಿಲ್ಲ. ಉಸ್ತುವಾರಿ ಸಚಿವರ ಕುಮ್ಮಕ್ಕಿನಿಂದ ಸುಳ್ಳು ಎಫ್ ಐಆರ್ ನನ್ನ ಮೇಲೆ ದಾಖಲಾಗಿದೆ. ಇದರ ವಿರುದ್ಧ ಹೋರಾಟ ರಾಜ್ಯಮಟ್ಟದಲ್ಲಿಯೂ ನಡೆಯಲಿದೆ ಎಂದು ತಿಳಿಸಿದರು.
ಅಕ್ರಮವಾಗಿ ಮಣ್ಣು ಲೂಟಿ ಮಾಡುವವರ ವಿರುದ್ದ ಯಾವುದೇ ಕೇಸ್ ದಾಖಲಿಸಿಲ್ಲ. ಕೃಷಿ ಇಲಾಖೆಯ ಅಧಿಕಾರಿಗಳು ಎಫ್ ಐಆರ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಮಣ್ಣು ಸಾಗಾಟ ಮಾಡಲು ಬಂದವರು ಯಾರು ಎಂಬುದು ಗೊತ್ತಿಲ್ಲ. ಕೆರೆಯಂಗಳದ ಮಣ್ಣು ಸಾಗಾಟ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ದಾಖಲಿಸಿದ್ದಾರೆ. ಸಾಕ್ಷ್ಯಗಳಿದ್ದರೂ ಕ್ರಮ ಕೈಗೊಳ್ಳದ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ನಡೆ ಸರಿಯಲ್ಲ. ಸಚಿವರ ಭಯಕ್ಕೆ ಬಿದ್ದು ಈ ರೀತಿಯಾಗಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಶ್ರೀನಿವಾಸ್ ದಾಸಕರಿಯಪ್ಪ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಹೆಚ್. ಪಿ. ರಾಜೇಶ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ
ಶಿವಕುಮಾರ್, ಬಿ. ಟಿ. ಸಿದ್ಧಪ್ಪ, ಪಿ. ರಾಜೇಶ್ ನಾಯ್ಕ ಮತ್ತಿತರರು ಹಾಜರಿದ್ದರು.





Leave a comment