ದಾವಣಗೆರೆ: ದಾವಣಗೆರೆ ವಿಭಾಗದ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ.
READ ALSO THIS STORY: BIG BREAKING: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಕೇಸಲ್ಲಿ ಬಂಧಿತರ ಸಂಖ್ಯೆ 11ಕ್ಕೇರಿಕೆ: ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವರಾಜ್ ಬಂಧನ!
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯವನ್ನು ಮುಂದಿನ ಆದೇಶದವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ತಿಳಿಸಿದ್ದಾರೆ.
ಘಟನೆಯ ವಿವರ:
ಜನವರಿ 16, 2026:
ಮೊದಲ ಚುಕ್ಕೆ ಜಿಂಕೆಯ ಸಾವು ದಾಖಲಾಯಿತು. ತಕ್ಷಣವೇ ವಿಭಾಗೀಯ ಅಧಿಕಾರಿಗಳು ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಜಾರಿಗೆ ತಂದರು.
ಜ. 17 ರಂದು ಮತ್ತೆರಡು ಜಿಂಕೆಗಳು ಮೃತಪಟ್ಟವು. ತಕ್ಷಣವೇ ಪ್ರಾಣಿ ಆರೋಗ್ಯ ಸಲಹಾ ಸಮಿತಿಯ ಸದಸ್ಯರನ್ನು ಸ್ಥಳಕ್ಕೆ ಭೇಟಿ ನೀಡಲು ಕೋರಲಾಯಿತು.
ಜನವರಿ 18 ರಂದು ಮತ್ತೊಂದು ಜಿಂಕೆ ಮೃತಪಟ್ಟಿರುವುದು ಕಂಡುಬಂದಿದೆ. ಸಮಿತಿಯ ಸದಸ್ಯರು ಸ್ಥಳ ಪರಿಶೀಲನೆ ನಡೆಸಿ, ನಿಖರ ಕಾರಣ ತಿಳಿಯಲು ರಕ್ತದ ಮಾದರಿ ಮತ್ತು ಅಂಗಾಂಗಗಳನ್ನು ಲ್ಯಾಬ್‌ಗೆ ಕಳುಹಿಸಿದ್ದಾರೆ.
ಶಂಕಿತ ಕಾರಣ ಮತ್ತು ಕೈಗೊಂಡ ಕ್ರಮಗಳು:
ಪ್ರಾಥಮಿಕ ಲಕ್ಷಣಗಳ ಪರಿಶೀಲನೆಯ ನಂತರ, ಇದು ‘ಹೆಮರಾಜಿಕ್ ಸೆಪ್ಟಿಸೆಮಿಯಾ’ (HS) ಎಂಬ ಸಾಂಕ್ರಾಮಿಕ ರೋಗವಿರಬಹುದು ಎಂದು ಸಮಿತಿಯು ಶಂಕಿಸಿದೆ. ರೋಗ ಹರಡುವುದನ್ನು ತಡೆಯಲು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಾಗಿದೆ:
ಉಳಿದ ಜಿಂಕೆಗಳಿಗೆ ರೋಗ ನಿರೋಧಕ ಮತ್ತು ಮುನ್ನೆಚ್ಚರಿಕೆ ಚಿಕಿತ್ಸೆಯನ್ನು ತಕ್ಷಣವೇ ಪ್ರಾರಂಭಿಸಲಾಗಿದೆ.
ಹಿರಿಯ ಪಶುವೈದ್ಯರು ಮತ್ತು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಮೃಗಾಲಯದಾದ್ಯಂತ ಕಟ್ಟುನಿಟ್ಟಿನ ಜೈವಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ.
ಮೃಗಾಲಯದಲ್ಲಿ ಒಟ್ಟು 170 ಚುಕ್ಕೆ ಜಿಂಕೆಗಳಿದ್ದು (94 ಹೆಣ್ಣು, 58 ಗಂಡು ಹಾಗೂ 18 ಮರಿಗಳು), ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ ಎಂದು ಕಿರು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ತಿಳಿಸಿದ್ದಾರೆ.





Leave a comment