Home ಕ್ರೈಂ ನ್ಯೂಸ್ ರಾಮಚಂದ್ರರಾವ್ ಘನಕಾರ್ಯ ಅಕ್ಷಮ್ಯ ಅಪರಾಧ: ಈಗಲೂ ” ನನಗೆ ಗೊತ್ತಿಲ್ಲ” ಎನ್ನುವುದು ಉತ್ತರವಾಗಬಾರದು ಎಂದ ಸುರೇಶ್ ಕುಮಾರ್!
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ರಾಮಚಂದ್ರರಾವ್ ಘನಕಾರ್ಯ ಅಕ್ಷಮ್ಯ ಅಪರಾಧ: ಈಗಲೂ ” ನನಗೆ ಗೊತ್ತಿಲ್ಲ” ಎನ್ನುವುದು ಉತ್ತರವಾಗಬಾರದು ಎಂದ ಸುರೇಶ್ ಕುಮಾರ್!

Share
Share

ಬೆಂಗಳೂರು: ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ. ಈಗಲೂ ನನಗೆ ಗೊತ್ತಿಲ್ಲ ಎನ್ನುವುದು ಉತ್ತರವಾಗಬಾರದು ಎಂದು ಮಾಜಿ ಸಚಿವ ಹಾಗೂ ಶಾಸಕ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ. ಹಿಂದೆ ಅವರ ಹೆಸರು ಮತ್ತು ಸ್ಥಾನದ ದುರುಪಯೋಗ ಮಾಡಿಕೊಂಡು ಭಾರಿ ಪ್ರಮಾಣದ ಚಿನ್ನದ ಸ್ಮಗ್ಲಿಂಗ್ ನಡೆದಿದ್ದಾಗ ಈ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳಿಸಿ ಸರ್ಕಾರ ಕೈ ತೊಳೆದುಕೊಂಡಿತ್ತು ಎಂದು ಆರೋಪಿಸಿದ್ದಾರೆ.

ಇದೀಗ ಪ್ರಕಟವಾಗಿರುವ ಈ ಪೊಲೀಸ್ ಅಧಿಕಾರಿಯ ಘನಂಧಾರಿ ಕಾರ್ಯವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಶೀಲಿಸಬೇಕು. ಮತ್ತೆ ಕಡ್ಡಾಯ ರಜೆ ಮೇಲೆ ಕಳಿಸಿ ಕೈ ತೊಳೆದುಕೊಳ್ಳುವುದು ಸರ್ಕಾರಕ್ಕೆ ಭೂಷಣವಲ್ಲ ಎಂದು ಕಿಡಿಕಾರಿದ್ದಾರೆ.

ಸಮವಸ್ತ್ರದಲ್ಲಿಯೇ, ತನ್ನ ಕಚೇರಿಯಲ್ಲಿಯೇ ಈ ಹಿರಿಯ ಅಧಿಕಾರಿ ಮಾಡಿರುವ ಕೃತ್ಯ ಪೊಲೀಸ ಇಲಾಖೆಯನ್ನೇ ಸಂಶಯದಿಂದ ಅನುಮಾನದಿಂದ ನೋಡುವಂತಾಗಿದೆ ಎಂದು ಹೇಳಿದ್ದಾರೆ.

IPS ಎಂಬ ಅತ್ಯಂತ ಜವಾಬ್ದಾರಿಯುತ ಹೆಸರಿಗೆ ಈ ವ್ಯಕ್ತಿ ಇಂದು ಅಪಚಾರವೆಸಗಿದ್ದಾರೆ. ಸಮಾಜಕ್ಕೆ ಒಳ್ಳೆಯ ಸಂದೇಶ ಕಳಿಸಬೇಕೆಂದರೆ, ಸರ್ಕಾರ ಈ ಬಗ್ಗೆ ತುರ್ತು ಮತ್ತು ಪರಿಣಾಮಕಾರಿ ಕ್ರಮವನ್ನು ಘೋಷಿಸಬೇಕು. ಇಲ್ಲದಿದ್ದರೆ ಇಡೀ ಆಡಳಿತವೇ ಕಡ್ಡಾಯ ರಜೆ ಮೇಲೆ ಹೋದಂತೆ ಜನ ಭಾವಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *