ಬೆಂಗಳೂರು: ಕೋಟ್ಯಂತರ ಭಕ್ತರ ಆರಾಧ್ಯ ದೈವ ಶ್ರೀ ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ತಿರಸ್ಕರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈ ಹಿಂದೆ ಕೇಸರಿಪೇಟ, ಕುಂಕುಮ ಧಿಕ್ಕರಿಸಿದ್ದ ಸಿದ್ದರಾಮಯ್ಯ ಅವರು ಮುಸ್ಲಿಂರ ಟೋಪಿ ಧರಿಸಿ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಮತ್ತೆ ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಭಾವಚಿತ್ರ ತಿರಸ್ಕಾರ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
ಇದು ಬಿಜೆಪಿಗೆ ಮತ್ತೊಂದು ಅಸ್ತ್ರವಾಗಿದೆ.ಈ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯರ ಹಿಂದೂ ವಿರೋಧಿ ನೀತಿ ಖಂಡಿಸಿದೆ. ತಮ್ಮ ಹಿಂದೂ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಸಿದ್ದರಾಮಯ್ಯ ಅವರು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿಗಳೇ ಇದು ಕೇವಲ ಫೋಟೋ ತಿರಸ್ಕಾರವಲ್ಲ ಬದಲಿಗೆ ಸನಾತನ ಧರ್ಮ ಮತ್ತು ಹಿಂದೂ ಸಂಸ್ಕೃತಿಯ ಮೇಲಿನ ನಿಮ್ಮ ತಾತ್ಸಾರಕ್ಕೆ ಸಾಕ್ಷಿ. ಬಹುಸಂಖ್ಯಾತ ಹಿಂದೂಗಳ ಭಾವನೆಗಳ ಜೊತೆ ಆಟವಾಡುವುದನ್ನ ಕಾಂಗ್ರೆಸ್ಸಿಗರು ನಿಲ್ಲಿಸಲಿ
ಎಂದು ಸವಾಲು ಹಾಕಿದೆ.





Leave a comment