ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್. ಬಿ. ಮಂಜಪ್ಪನವರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.
READ ALSO THIS STORY: ಅಂದು ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಪುತ್ರಿ ರನ್ಯಾಳಿಂದ ಸಂಕಷ್ಟ: ಇಂದು ರಾಸಲೀಲೆ ಕೇಸಲ್ಲಿ ಲಾಕ್, ಡಿಜಿಪಿ ರಾಮಚಂದ್ರರಾವ್ ಖೆಡ್ಡಾಕ್ಕೆ ಕೆಡವಿದ್ದು ಯಾರು?
ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಪದೇ ಪದೇ ಕೆಣಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾರ್ವಜನಿಕವಾಗಿ ತೆಜೋವಧೆ ಮತ್ತು ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕುತ್ತಿರುವ ಹಿನ್ನಲೆ, ರೇಣುಕಾಚಾರ್ಯನ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಈ ಕೂಡಲೇ ಬಂಧಿಸಬೇಕೆಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಿಗೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ. ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಸಾಗರ್ ಎಲ್.ಹೆಚ್., ವಸಂತನಾಯ್ಕ, ಬೆನಕಪ್ಪ ಮತ್ತಿತರರಿದ್ದರು.




Leave a comment