ದಾವಣಗೆರೆ: ಅಕ್ರಮವಾಗಿ ಮಣ್ಣು ಸಾಗಾಟ ಸೇರಿದಂತೆ ಇತರೆ ಆರೋಪ ಮಾಡಿರುವ ಬಿಜೆಪಿ ನಾಯಕರ ಅವಧಿಯಲ್ಲಿ ಏನೇನಾಗಿದೆ ಎಂಬ ಕುರಿತಂತೆ ತನಿಖೆಯಾಗಲಿ. ಯಾರೇ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸವಾಲು ಹಾಕಿದ್ದಾರೆ.
READ ALSO THIS STORY: ಕಾಂಗ್ರೆಸ್ ಗೂಂಡಾ ಅಧ್ಯಕ್ಷ ಎಂದಿದ್ದ ರೇಣುಕಾಚಾರ್ಯ ವಿರುದ್ದ ಎಸ್ಪಿ ಉಮಾ ಪ್ರಶಾಂತ್ ಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ದೂರು!
ನಗರದ ಶ್ರೀ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದ ಹಂದಕಂಬದ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಅಧಿಕಾರಿಗಳ ಮೇಲೆ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಜಿಲ್ಲೆಯನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ನಾನು ತಪ್ಪು ಮಾಡಿದ್ದರೂ ಹೇಳುವ ಕೆಲಸ ಅಧಿಕಾರಿಗಳು ಮಾಡುತ್ತಾರೆ. ಬೇರೆಯವರು ತಪ್ಪು ಮಾಡಿದರೂ ಹೇಳುತ್ತಾರೆ. ನಾನು ತಪ್ಪೇ ಮಾಡಿದ್ದು ಸಾಬೀತಾದರೆ ಶಿಕ್ಷೆಯಾಗಲಿ. ಬೇಡವೆಂದವರು ಯಾರು ಎಂದು ಪ್ರಶ್ನಿಸಿದರು.
ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡೋದು ಸರಿಯಲ್ಲ. ಅಧಿಕಾರಿಗಳನ್ನು ಏಕವಚನದಲ್ಲಿ ನಿಂದಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿಯ ಘಟನೆಗಳು ಆಗಬಾರದು. ಸಂಪ್ರದಾಯವೂ ಅಲ್ಲ. ಎಲ್ಲವನ್ನೂ ತಿಳಿದುಕೊಂಡು ಮಾತನಾಡಲಿ. ಇವೆಲ್ಲಾ ನೋಡಿದ್ದೇವೆ. ಯಾವುದೇ ಕಾರಣಕ್ಕೂ ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. ಇಂಥವನ್ನೆಲ್ಲಾ ಬಹಳ ನೋಡಿಬಿಟ್ಟಿದ್ದೇವೆ ಎಂದು ತಿಳಿಸಿದರು.




Leave a comment