Home ದಾವಣಗೆರೆ ಕಮೀಷನ್ ಗಾಗಿ ಮಂತ್ರಿ ರಾಜೀನಾಮೆ ನೀಡಿದ್ದು ನೆನಪಿಲ್ಲವೇ? ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅವಾಂತರ ಸರಿಪಡಿಸುತ್ತಿದ್ದೇವೆ: ಪ್ರಿಯಾಂಕ್ ಖರ್ಗೆ!
ದಾವಣಗೆರೆನವದೆಹಲಿಬೆಂಗಳೂರು

ಕಮೀಷನ್ ಗಾಗಿ ಮಂತ್ರಿ ರಾಜೀನಾಮೆ ನೀಡಿದ್ದು ನೆನಪಿಲ್ಲವೇ? ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅವಾಂತರ ಸರಿಪಡಿಸುತ್ತಿದ್ದೇವೆ: ಪ್ರಿಯಾಂಕ್ ಖರ್ಗೆ!

Share
Share

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಡುತ್ತಿದ್ದ ಕಮಿಷನ್ ಪಿಡುಗಿಗಾಗಿ ಮಂತ್ರಿಯೊಬ್ಬರು ರಾಜೀನಾಮೆ ನೀಡಿದ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಂತಹ ವಿಸ್ತಾರವಾದ ಮತ್ತು ಪ್ರಮುಖವಾದ ಇಲಾಖೆ ವರ್ಷಗಳ ಕಾಲ ಮಂತ್ರಿಯೇ ಇಲ್ಲದೆ ಸೊರಗಿತ್ತು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಇಲಾಖೆಯ ವ್ಯವಸ್ಥೆಯನ್ನು ಹಳ್ಳ ಹಿಡಿಸಲಾಗಿತ್ತು, ಬಿಜೆಪಿ ಮಾಡಿ ಹೋಗಿದ್ದ ಅವಾಂತರಗಳನ್ನು ಸರಿಪಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಈ ನಡುವೆ ಇವರ ಸುಳ್ಳು ಆರೋಪಗಳನ್ನೂ ಸಹ ಸಮರ್ಥವಾಗಿ ಎದುರಿಸುತ್ತೇವೆ ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗದ ಅನುದಾನದ ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಪಿ. ರಾಜೀವ್ ಹೇಳುವ ಮಾದರಿಯಲ್ಲಿ ಯಾವುದೇ ಆಕ್ಷೇಪಣೆಗಳು ಬಂದಿಲ್ಲ, ಹೀಗಿರುವಾಗ ಇವರ ಆರೋಪಕ್ಕೆ ಸಾಕ್ಷಿಗಳೇನು? ಎಂದು ಪ್ರಶ್ನಿಸಿದ್ದಾರೆ.

2020-21ರಿಂದ 2022-23ರವರೆಗೆ, BJP Karnataka ಆಡಳಿತದ ಅವಧಿಯಲ್ಲಿ 65,325.36 ಲಕ್ಷ ರೂಪಾಯಿಗಳನ್ನು ಆಕ್ಷೇಪಣೆಯಲ್ಲಿರಿಸಲಾಗಿತ್ತು, ಇದರಲ್ಲಿ 4,586.63 ಲಕ್ಷ ರೂಪಾಯಿಗಳ ವಸೂಲಾತಿಗೆ ಸೂಚಿಸಲಾಗಿತ್ತು, ಇದಕ್ಕೆ ಉತ್ತರ ಹೇಳುವವರು ಯಾರು? ಎಂದು ಕೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *