ಕೇರಳ: ಕೇರಳದ ವ್ಯಕ್ತಿಯ ಆತ್ಮಹತ್ಯೆಯ ನಂತರ, ‘ಕಿರುಕುಳ’ ವೀಡಿಯೊವನ್ನು ಚಿತ್ರೀಕರಿಸಿದ್ದ ಯುವತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವೈರಲ್ ವೀಡಿಯೊದಲ್ಲಿ ಕಂಡುಬರುವ ದೀಪಕ್ ಯು ಆತ್ಮಹತ್ಯೆ ಮಾಡಿಕೊಂಡ ನಂತರ ಆಕ್ರೋಶ ಭುಗಿಲೆದ್ದಿತ್ತು. ಪೊಲೀಸರು ಜಾಮೀನು ರಹಿತ ವಾರೆಂಟ್ ಅನ್ನು ಯುವತಿ ವಿರುದ್ಧ ಹೊರಡಿಸಿದ್ದಾರೆ. ದೀಪಕ್ ತಾಯಿ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
42 ವರ್ಷದ ವ್ಯಕ್ತಿಯ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಆನ್ಲೈನ್ನಲ್ಲಿ ವೀಡಿಯೊ ಪೋಸ್ಟ್ ಮಾಡಿದ ಆರೋಪದ ಮೇಲೆ 35 ವರ್ಷದ ಮಹಿಳೆ ಶಿಮ್ಜಿತಾ ಮುಸ್ತಫಾ ವಿರುದ್ಧ ಕೇರಳದ ಕೋಝಿಕ್ಕೋಡ್ನಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಭಾನುವಾರ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೀಪಕ್ ಶವ ಪತ್ತೆಯಾಗಿತ್ತು. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡು ವೈರಲ್ ಆದ ನಂತರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಆರೋಪಿಸಲಾಗಿದೆ.
ಕೆಲಸಕ್ಕೆ ಸಂಬಂಧಿಸಿದ ಉದ್ದೇಶಗಳಿಗಾಗಿ ಅವರು ಶುಕ್ರವಾರ ಕಣ್ಣೂರಿಗೆ ಬಸ್ ಮೂಲಕ ಪ್ರಯಾಣಿಸಿದ್ದರು. ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ, ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ವೀಡಿಯೊ ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅವರ ಸಂಬಂಧಿಕರ ಪ್ರಕಾರ, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡರು. ದೀಪಕ್ ಲೈಂಗಿಕ ಕಿರುಕುಳದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಖ್ಯಾತಿಗಾಗಿ ಶಿಮ್ಜಿತಾ ದೀಪಕ್ ನ ಹತ್ಯೆಗೆ ಕಾರಣವಾಗುವಂಥ ಗಂಭೀರ ಸ್ವರೂಪದ ಅಪರಾಧ ಎಸಗಿದ್ದಾಳೆ ಎಂದು ಆತನ ಕುಟುಂಬ ಆರೋಪಿಸಿದೆ.
ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ದೀಪಕ್ ಗೆ ಭಾರೀ ಬೆದರಿಕೆ, ಮುಜುಗರ, ಅಪಮಾನ ಆಗಿತ್ತು ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವು ಪೊಲೀಸ್ ತನಿಖೆಗೆ ಆದೇಶಿಸಿದೆ. ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಉತ್ತರ ವಲಯ ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿ) ಅವರಿಗೆ ಸಮಿತಿಯು ನಿರ್ದೇಶಿಸಿದೆ. ಫೆಬ್ರವರಿ 19 ರಂದು ಕೋಝಿಕ್ಕೋಡ್ನಲ್ಲಿ ನಡೆಯಲಿರುವ ಆಯೋಗದ ಸಭೆಯಲ್ಲಿ ಈ ಪ್ರಕರಣವನ್ನು ಪರಿಗಣಿಸಲಾಗುತ್ತದೆ





Leave a comment