Home ದಾವಣಗೆರೆ ಮನರೇಗಾ ಯೋಜನೆ ಯಥಾಸ್ಥಿತಿಗೆ ಒತ್ತಾಯಿಸಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಜ.25ಕ್ಕೆ ಪಾದಯಾತ್ರೆ
ದಾವಣಗೆರೆನವದೆಹಲಿಬೆಂಗಳೂರು

ಮನರೇಗಾ ಯೋಜನೆ ಯಥಾಸ್ಥಿತಿಗೆ ಒತ್ತಾಯಿಸಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಜ.25ಕ್ಕೆ ಪಾದಯಾತ್ರೆ

Share
Share

ದಾವಣಗೆರೆ: ಮನರೇಗಾ ಯೋಜನೆಯನ್ನು ಯಥಾಸ್ಥಿತಿಯಲ್ಲಿ ಕಾಪಾಡಬೇಕು ಮತ್ತು ಉದ್ದೇಶಿತ ಜಿ ರಾಮ್ ಜಿ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಜನವರಿ 25ರಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿಯನ್ನೂ ಓದಿ: ಮುಸ್ಲಿಂ ಯುವಕನ ಜೊತೆ ಓಡಿ ಹೋಗಿ ಮದುವೆಯಾಗಿದ್ದ ಹಿಂದೂ ಯುವತಿ: ಇಬ್ಬರನ್ನೂ ಹತ್ಯೆ ಮಾಡಿದ ಮೃತಳ ಸಹೋದರರು!

ಅಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳೆ ಕಡ್ಲೆಬಾಳು ಗ್ರಾಮದಿಂದ ಆರಂಭವಾಗುವ ಈ ಪಾದಯಾತ್ರೆ ವಾಲ್ಮೀಕಿ ನಗರ, ಕಡ್ಲೆಬಾಳು, ಅರಸಾಪುರ, ಚಿಕ್ಕ ಓಬಜ್ಜಿಹಳ್ಳಿ, ದೊಡ್ಡ ಓಬಜ್ಜಿಹಳ್ಳಿ ಗ್ರಾಮಗಳಲ್ಲಿ ಸಂಚರಿಸಲಿದೆ.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ.ಪರಶುರಾಮ್ ಮಾಗಾನಹಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಪಾದಯಾತ್ರೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವನಗೌಡ್ರು, ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾದ ಮುದೇಗೌಡ್ರು ಗಿರೀಶ್, ಮೇಕಾ ಮುರುಳಿಕೃಷ್ಣ, ರಾಘವೇಂದ್ರ ನಾಯ್ಕ, ಅಂಜಿಬಾಬು ಮತ್ತಿತರರು ಭಾಗವಹಿಸುವರು.

ಆದ ಕಾರಣ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಕೆಪಿಸಿಸಿ ಸದಸ್ಯರು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ ಸದಸ್ಯರುಗಳು, ಗ್ಯಾರಂಟಿ ಯೋಜನೆಯ ಜಿಲ್ಲಾ ಮತ್ತು ತಾಲೂಕು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ, ಜವಾಹರ್ ಬಾಲ್ ಮಂಚ್, ರಾಜೀವ್‍ಗಾಂಧಿ ಪಂಚಾಯತ್ ರಾಜ್, ಬೀದಿಬದಿ ವ್ಯಾಪಾರಸ್ಥರ ವಿಭಾಗ, ಇಂಟಕ್ ವಿಭಾಗ, ಅಸಂಘಟಿತ ಕಾರ್ಮಿಕರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ / ತಾಲ್ಲೂಕು, ಎಪಿಎಂಸಿ ಮತ್ತು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಕೋರಿದ್ದಾರೆ.

Share

Leave a comment

Leave a Reply

Your email address will not be published. Required fields are marked *