Home ದಾವಣಗೆರೆ ವಿಬಿ ಜಿ ರಾಮ್ ಜಿ ಜಾರಿಗೆ ಸರ್ಕಾರದ ಅಸ್ತಿತ್ವಕ್ಕೆ ನೆಚ್ಚಿಕೊಂಡಿರುವ ಚಂದ್ರಬಾಬು ನಾಯ್ಡುರ ಆತಂಕ ಗಂಭೀರ ಪರಿಣಾಮದ ಮುನ್ಸೂಚನೆ: ಸಿಎಂ ಸಿದ್ದರಾಮಯ್ಯ
ದಾವಣಗೆರೆನವದೆಹಲಿಬೆಂಗಳೂರು

ವಿಬಿ ಜಿ ರಾಮ್ ಜಿ ಜಾರಿಗೆ ಸರ್ಕಾರದ ಅಸ್ತಿತ್ವಕ್ಕೆ ನೆಚ್ಚಿಕೊಂಡಿರುವ ಚಂದ್ರಬಾಬು ನಾಯ್ಡುರ ಆತಂಕ ಗಂಭೀರ ಪರಿಣಾಮದ ಮುನ್ಸೂಚನೆ: ಸಿಎಂ ಸಿದ್ದರಾಮಯ್ಯ

Share
Share

ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಬಿ ಜಿ ರಾಮ್ ಜಿ ಕಾಯ್ದೆಯ ಜಾರಿ ಬಗ್ಗೆ ವ್ಯಕ್ತಪಡಿಸಿರುವ ಆತಂಕ, ರಾಜಕೀಯವಾಗಿ ಮಹತ್ವದ್ದಾಗಿದೆ ಮತ್ತು ಕೇಂದ್ರ- ರಾಜ್ಯ ಸಂಬಂಧದ ದೃಷ್ಟಿಯಿಂದ ಗಂಭೀರ ಪರಿಣಾಮಗಳ ಬಗ್ಗೆ ಯೋಚನೆ ಮಾಡುವಂತೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ವಿಶೇಷವಾಗಿ ಈ ಕಾಯ್ದೆಯಲ್ಲಿ ಅನುದಾನ ಹಂಚಿಕೆಯ ಹೊಸ ಮಾದರಿ ಹಾಗೂ ರಾಜ್ಯಗಳ ಮೇಲೆ ಬರುವ ಹೆಚ್ಚುವರಿ ಆರ್ಥಿಕ ಹೊರೆಯ ಕುರಿತು ಚಂದ್ರಬಾಬು ನಾಯ್ಡು ಅವರು ವ್ಯಕ್ತಪಡಿಸಿರುವ ಭೀತಿಯನ್ನು ಎಲ್ಲ ರಾಜ್ಯ ಸರ್ಕಾರಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಈ ಆತಂಕಗಳು ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಅಸ್ತಿತ್ವಕ್ಕಾಗಿ ನೆಚ್ಚಿಕೊಂಡಿರುವ ಮೈತ್ರಿ ಪಕ್ಷದಿಂದಲೇ ಬಂದಿರುವುದು ವಿಶೇಷ ಎಂದಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ವಿಬಿ‌ ಜಿ‌ ರಾಮ್ ಜಿ ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಪರಸ್ಪರ ಸಹಕಾರದ ಆಶಯಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಎಚ್ಚರಿಸುತ್ತಿವೆ. ಈ ಕಾಯ್ದೆಯು ಹಣಕಾಸಿನ ಹೊಣೆಗಾರಿಕೆಯನ್ನು‌ ರಾಜ್ಯಗಳ‌ ಹೆಗಲಿಗೆ ವರ್ಗಾಯಿಸುತ್ತದೆ ಎಂಬುದು ನಮ್ಮ ಆಕ್ಷೇಪ ಎಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದು ಮಾಡಿ, ಅಗತ್ಯ ಸುಧಾರಣೆಗಳೊಂದಿಗೆ ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸಲೇಬೇಕು ಎಂಬಂಶ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಭದ್ರತೆಯನ್ನು ಅನಿಶ್ಚಿತತೆಗೆ ಒಡ್ಡಲು ಸಾಧ್ಯವಿಲ್ಲ. ನಿಶ್ಚಿತ ಅನುದಾನ ಮತ್ತು ಎಲ್ಲಾ ರಾಜ್ಯಗಳಿಗೂ ಸಮಾನ ನ್ಯಾಯದ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಧ್ಯವಿದೆಯೇ ಹೊರತು, ರಾಜಕೀಯ ಹೊಂದಾಣಿಕೆಯ ಲೆಕ್ಕಾಚಾರಗಳಿಂದಲ್ಲ ಎಂದು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *