ದಾವಣಗೆರೆ: ಜಿಲ್ಲೆಯ 1.30 ಲಕ್ಷ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಘೋಷಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ಜನತೆಯನ್ನುದ್ದೇಶಿಸಿ ಅವರು ಮಾತನಾಡಿದರು.
READ ALSO THIS STORY: ಅಭಿವೃದ್ಧಿ ಪಥದಲ್ಲಿ ದಾವಣಗೆರೆ, ಪಂಚ ಗ್ಯಾರಂಟಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಬದ್ಧ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ನಿರಂತರ ನೀರು:
ಜಿಲ್ಲೆಯ 62 ಗ್ರಾಮಗಳು 24*7 ನೀರು ಪೂರೈಕೆ ಗ್ರಾಮಗಳೆಂದು ಘೋಷಿಸಲ್ಪಟ್ಟಿವೆ. ದಾವಣಗೆರೆ ನಗರ ಭಾಗದಲ್ಲಿ ಏಪ್ರಿಲ್ 2026ರೊಳಗೆ ಎಲ್ಲರಿಗೂ ನಿರಂತರ ನೀರು ಒದಗಿಸಲಾಗುವುದು ಎಂದು ತಿಳಿಸಿದರು.
ಪರಿಸರ ಪ್ರಶಸ್ತಿ:
ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕೈಗೊಂಡ ವೈಜ್ಞಾನಿಕ ಕ್ರಮಗಳಿಗಾಗಿ ದಾವಣಗೆರೆಗೆ ರಾಜ್ಯ ಮಟ್ಟದ ‘ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ’ ಲಭಿಸಿದೆ ಎಂದು ಹೇಳಿದರು.
ಐ.ಟಿ. ಹಬ್:
ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ‘ಐ.ಟಿ. ಹಬ್’ ಮೂಲಕ ಪ್ರತಿಷ್ಠಿತ ಕಂಪನಿಗಳನ್ನು ಆಹ್ವಾನಿಸಲಾಗಿದೆ. ಇದಕ್ಕೆ ಬೇಕಾದ ಮೂಲಭೂತ ಸೌಕರ್ಯ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ ಎಂದು
ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ , ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್, ಪೂರ್ವ ವಲಯ ಮಹಾನಿರೀಕ್ಷಕರಾದ ಡಾ: ಬಿ.ಆರ್.ರವಿಕಾಂತೇಗೌಡ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ , ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಯೋಧರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.





Leave a comment