Home ದಾವಣಗೆರೆ ಕಾಗದ ರಹಿತ ನೋಂದಣಿ ವ್ಯವಸ್ಥೆ: ಕರ್ನಾಟಕ ಒನ್, ದಾವಣಗೆರೆ ಒನ್ ಸೇರಿ ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿಗೆ ತರಬೇತಿ
ದಾವಣಗೆರೆನವದೆಹಲಿಬೆಂಗಳೂರು

ಕಾಗದ ರಹಿತ ನೋಂದಣಿ ವ್ಯವಸ್ಥೆ: ಕರ್ನಾಟಕ ಒನ್, ದಾವಣಗೆರೆ ಒನ್ ಸೇರಿ ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿಗೆ ತರಬೇತಿ

Share
ತರಬೇತಿ
Share

ದಾವಣಗೆರೆ: ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ.

ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.

ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *