ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸರ್ಕಾರ ನಿರ್ಧಾರ

On: September 17, 2024 9:59 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-09-2024

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೂ ಕೂಡ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ
ಎಂದು ಹೇಳಿದರು.

ಇಂದು ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ
ಅರ್ಧ ಭಾಗದ ಅನುದಾನವನ್ನು ಕೇಂದ್ರ ಸರ್ಕಾರ ನೀಡಬೇಕಿದೆ ಎಂದರು.

2013 ರಲ್ಲಿ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿದ ವರದಿಯನ್ನು ನಾವು ಯಥಾವತ್ತಾಗಿ ಒಪ್ಪಿಕೊಂಡೆವು‌. ಪರಿಣಾಮ 371J ಜಾರಿಯಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ಹಾಕಿಕೊಂಡು ಕೆಲಸಗಳು ಆರಂಭವಾದವು. ಇಂದಿನ‌ ಸಂಪುಟ ಸಭೆಯಲ್ಲಿ ಒಟ್ಟು 56 ವಿಷಯಗಳು ಚರ್ಚೆಯಾಗಿ ಒಪ್ಪಿಗೆ ಪಡೆಯಲಾಗಿದೆ. ಇದರಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಪಟ್ಟ ಸಂಗತಿಗಳನ್ನು ಒಪ್ಪಿಗೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಇವುಗಳಲ್ಲಿ ಬಹಳ ಮುಖ್ಯವಾಗಿ ಬೀದರ್-ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಗಳನ್ನಾಗಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ. ಬೀದರ್- ಗುಲ್ಬರ್ಗದ ಎಲ್ಲಾ ಜನ ವಸತಿ ಪ್ರದೇಶಕ್ಕೆ 7200 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ
ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಿದ್ದೇವೆ. 7200 ಕೋಟಿಯಲ್ಲಿ ಶೇ50 ರಷ್ಟು ಮೊತ್ತವನ್ನು ಕೊಡುವಂತೆ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸಲು
ತೀರ್ಮಾನ ಮಾಡಿದ್ದೇವೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ‌ ಸಚಿವಾಲಯ ರಚಿಸಲು ತೀರ್ಮಾನ ಮಾಡಿದ್ದು ಇದರಿಂದ ಈ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment