(DXC Scholarship) ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಡಿಎಕ್ಸ್ಸಿ ಪ್ರೋಗ್ರೆಸಿಂಗ್ ಮೈಂಡ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಯಾವುದೇ ವರ್ಷದ ಪದವಿ ಅಭ್ಯಾಸ ಮಾಡುತ್ತಿರುವ ಮಹಿಳೆಯರು ಮತ್ತು ಲಿಂಗಪರಿವರ್ತಿತ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
• 13ರಿಂದ 25 ವರ್ಷ ವಯಸ್ಸಿನೊಳಗಿನ ಮತ್ತು ಕಳೆದ 2/3 ವರ್ಷಗಳಲ್ಲಿ ರಾಜ್ಯ/ ರಾಷ್ಟ್ರೀಯ / ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ / ದೇಶವನ್ನು ಪ್ರತಿನಿಧಿಸಿರುವ ಮಹಿಳಾ ಕ್ರೀಡಾಪಟುಗಳು ಕೂಡ ಅರ್ಜಿ ಸಲ್ಲಿಸಬಹುದು.
• ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿ/ಸೆಮಿಸ್ಟರ್ನಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹4,00,000ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು (ಕ್ರೀಡಾಪಟುಗಳಿಗೆ ₹5,00,000)
ಎಷ್ಟು ಸ್ಕಾಲರ್ ಶಿಪ್ ಲಭ್ಯ:
ಸ್ಟೆಮ್ನಲ್ಲಿ ಗ್ರಾಜುಯೇಶನ್ಗೆ – ₹50,000
ಕ್ರೀಡಾಪಟುಗಳಿಗೆ – ₹1,25,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/DXCS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
06-10-2024