Home ದಾವಣಗೆರೆ ನಿರುದ್ಯೋಗಿ ಯುವಕ, ಯುವತಿಯರಿಗೆ ಗುಡ್ ನ್ಯೂಸ್: 35 ದಿನ ಬ್ಯೂಟಿ ಪಾರ್ಲರ್ ಫ್ರೀ ಟ್ರೈನಿಂಗ್!
ದಾವಣಗೆರೆಬೆಂಗಳೂರು

ನಿರುದ್ಯೋಗಿ ಯುವಕ, ಯುವತಿಯರಿಗೆ ಗುಡ್ ನ್ಯೂಸ್: 35 ದಿನ ಬ್ಯೂಟಿ ಪಾರ್ಲರ್ ಫ್ರೀ ಟ್ರೈನಿಂಗ್!

Share
ಬ್ಯೂಟಿ ಪಾರ್ಲರ್
Share

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯಿಂದ ಮಾರ್ಚ್ 4 ರಂದು ಬ್ಯೂಟಿ ಪಾರ್ಲರ್ ಕುರಿತ 35 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

18 ರಿಂದ 50 ವರ್ಷಗಳ ವಯೋಮಾನದ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾವೆಲ್ಲಾ ದಾಖಲೆಗಳು ಬೇಕು:

ಬಿಪಿಎಲ್ ಕಾರ್ಡ್

ಆಧಾರ್ ಕಾರ್ಡ್ ಕಡ್ಡಾಯ

ಉಚಿತ ಊಟ ಮತ್ತು ವಸತಿ:

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *