ಬೆಂಗಳೂರು: ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರದರ್ಗ-IIIಬಿ) ಅಭಿವೃದ್ಧಿಗಾಗಿ 2025-26 ನೇ ಸಾಲಿನಲ್ಲಿ ಆಹಾರವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಲ್ಲಿ ಸಹಾಯಧನ ಸೌಲಭ್ಯ ಪಡೆಯಬಯಸುವ ಫಲಾಪೇಕ್ಷಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೊನೆ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.03.2026
ಯೋಜನೆ ವಿಶೇಷತೆ ಏನು?
ಆಹಾರವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ EV-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ
ಯೋಜನೆಯಾಗಿದೆ.
3 ಲಕ್ಷ ರೂ. ಸಹಾಯಧನ:
ನಿಗಮದಿಂದ ವಾಹನ ಖರೀದಿಗೆ ರೂ. 3 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳ/ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.
ಅರ್ಹತೆ ಏನು?
ಯೋಜನೆಯ ಸೌಲಭ್ಯ ಪಡೆಬಯಸುವವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು.
ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು
ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದರೆ ಅರ್ಹರಲ್ಲ.
ಪ್ರಯೋಜನ ಪಡೆದ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶದಲ್ಲಿ ಆನೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಲಾನುಭವಿಗಳ ಆಯ್ಕೆ ಹೇಗೆ?
ಈ ಯೋಜನೆಯಲ್ಲಿ ಮಾನ್ಯ ಶಾಸಕರ, ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು/ ನಿರ್ದೇಶಕ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಸೇವಾ ಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಿ ಅರ್ಜಿ:
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವ ವೀರಶೈವ-ಲಿಂಗಾಯತ ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvidcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.
- EV Food Van Subsidy
- Food Kiosk Subsidy Karnataka
- Government Subsidy for Lingayats
- KVIDCL Aahara Vahini Scheme
- Lingayat Community Schemes 2025-26
- Self Employment Schemes Karnataka.
- Seva Sindhu Application
- Veerashaiva Lingayat Development Corporation
- ಆಹಾರ ಕಿಯೋಸ್ಕ್ ಯೋಜನೆ
- ಆಹಾರ ವಾಹಿನಿ ಯೋಜನೆ 2025-26
- ಇವಿ ಆಹಾರ ವಾಹಿನಿ ಸಾಲ
- ದಾವಣಗೆರೆ ಸುದ್ದಿಗಳು.
- ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಸಹಾಯಧನ ಯೋಜನೆ ಕರ್ನಾಟಕ
- ಸೇವಾ ಸಿಂಧು ಅರ್ಜಿ





Leave a comment