SUDDIKSHANA KANNADA NEWS/ DAVANAGERE/ DATE:13-08-2023
ಬೆಂಗಳೂರು: ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ ಎಂದು ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ (Upendra) ಕಿಡಿಕಾರಿದ್ದಾರೆ.
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು? ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ:
Sulekere Big Story: ಕುಡಿಯಲು ಯೋಗ್ಯವಲ್ಲ ಸೂಳೆಕೆರೆ ನೀರು: ಜೀವಜಲಚರ, ಕೃಷಿಗೆ ಕಂಟಕನಾ? ಆತಂಕದಲ್ಲಿ ಮತ್ಸ್ಯ ಪ್ರಿಯರು, ರೈತಾಪಿ ವರ್ಗ…!
ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.
ಕ್ಷಮೆ ಕೇಳಿದ್ದ ಉಪೇಂದ್ರ (Upendra):
ಇಂದು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು,. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ. ಮತ್ತು ಈ ಮಾತಿಗೆ ಕ್ಷಮೆಯಿರಲಿ ಎಂದು ಉಪೇಂದ್ರ (Upendra) ಹೇಳಿದ್ದರು. ಆದರೂ ವಿವಾದ ಭುಗಿಲೆದ್ದಿದೆ.