Home ದಾವಣಗೆರೆ ಒಕ್ಕಲಿಗ, ಮರಾಠ ಮತ್ತು ಉಪ್ಪಾರ ಅಭಿವೃದ್ಧಿ ನಿಗಮಗಳಿಂದ ‘ಆಹಾರವಾಹಿನಿ’ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆನವದೆಹಲಿಬೆಂಗಳೂರು

ಒಕ್ಕಲಿಗ, ಮರಾಠ ಮತ್ತು ಉಪ್ಪಾರ ಅಭಿವೃದ್ಧಿ ನಿಗಮಗಳಿಂದ ‘ಆಹಾರವಾಹಿನಿ’ ಯೋಜನೆಗೆ ಅರ್ಜಿ ಆಹ್ವಾನ

Share
ಅರ್ಜಿ
Share

ದಾವಣಗೆರೆ: ಕರ್ನಾಟಕದ ವಿವಿಧ ಹಿಂದುಳಿದ ಸಮುದಾಯಗಳ ಆರ್ಥಿಕ ಸಬಲೀಕರಣಕ್ಕಾಗಿ ಸ್ಥಾಪಿತವಾಗಿರುವ ಒಕ್ಕಲಿಗ, ಮರಾಠ ಹಾಗೂ ಉಪ್ಪಾರ ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ ಪ್ರಸಕ್ತ ಸಾಲಿನ ‘ಆಹಾರವಾಹಿನಿ’ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸಮುದಾಯಗಳ ಮತ್ತು ಇವುಗಳ ಉಪ ಸಮುದಾಯಕ್ಕೆ ಸೇರಿದ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಮುಖ ದಿನಾಂಕಗಳು:

ಒಕ್ಕಲಿಗ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 06.

ಮರಾಠ ಮತ್ತು ಉಪ್ಪಾರ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 05.

ಸಂಪರ್ಕಿಸಿ:

ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ http://kvcdc.karnataka.gov.in ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 08192-230934, 6363564821 ಗೆ ಕರೆ ಮಾಡಬಹುದು ಎಂದು ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *