ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕರಾಗಿದ್ದ ಡಾ. ಶಾಮನೂರು ಶಿವಶಂಕರಪ್ಪರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ಎದುರಾಗಿದ್ದು, ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಲೋಕಸಭೆ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ
ಹಾಡಿಹೊಗಳಿದ್ದಾರೆ.
ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ದಾವಣಗೆರೆ-ಹರಿಹರ ನಗರದಲ್ಲಿ ರೂ.215 ಲಕ್ಷಗಳ ವೆಚ್ಚದಲ್ಲಿ ವಿವಿಧ ಉದ್ಯಾನವನ ಮತ್ತು ವೃತ್ತಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು
ಮಾತನಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಈ ಹಿಂದೆ ಸಂಸದರು ಇದ್ದು, ಇಲ್ಲದಂತೆ ಇದ್ದರು ಎಂದು ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಹೆಸರು ಪ್ರಸ್ತಾಪಿಸದೇ ಟೀಕಿಸಿದರು.
ಆದರೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸದರಾಗಿ ಲೋಕಸಭೆ ಒಳಗೂ ಮತ್ತು ಹೊರಗೂ ಧ್ವನಿ ಎತ್ತುವಂತೆ ಮಾಡಿದ್ದಾರೆ. ಇಂತಹ ಸಂಸದರನ್ನು ಪಡೆದ ದಾವಣಗೆರೆ ಜಿಲ್ಲೆ ಜನತೆ ಪುಣ್ಯ ಮಾಡಿದ್ದೇವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಮಾತು
ಈಗ ಆಶ್ಚರ್ಯ ತಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಇಲ್ಲವೇ ಅಹಿಂದ ವರ್ಗಕ್ಕೆ ಟಿಕೆಟ್ ನೀಡಬೇಕೆಂದು ಬಹಿರಂಗವಾಗಿಯೇ ಒತ್ತಾಯಿಸಿದ್ದರು.
ಮಾತ್ರವಲ್ಲದೇ, ತಾನೂ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು. ಸಂಸದೆ ಕೆಲಸಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವುದು ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಕುತೂಹಲ ಮೂಡಿಸಿರುವ ಅಬ್ದುಲ್ ಜಬ್ಬಾರ್ ಅವರ ನಡೆ ಬೆಂಬಲಿಗರಲ್ಲಿ ಕುತೂಹಲ ತಂದಿದೆ.
- Congress internal politics
- Davanagere development
- Davanagere South By-election
- Davanagere-Harihara Urban Development Authority.
- Karnataka Politics
- MLC Abdul Jabbar
- MP Dr. Prabha Mallikarjun
- Shamanur Shivashankarappa
- ಅಬ್ದುಲ್ ಜಬ್ಬಾರ್
- ಕರ್ನಾಟಕ ರಾಜಕಾರಣ
- ಕಾಂಗ್ರೆಸ್ ಭಿನ್ನಮತ
- ಜಿಲ್ಲಾ ಅಭಿವೃದ್ಧಿ
- ಡಾ. ಪ್ರಭಾ ಮಲ್ಲಿಕಾರ್ಜುನ್
- ದಾವಣಗೆರೆ ದಕ್ಷಿಣ ಉಪಚುನಾವಣೆ
- ದಾವಣಗೆರೆ ರಾಜಕೀಯ
- ಶಾಮನೂರು ಶಿವಶಂಕರಪ್ಪ





Leave a comment