Home ಉದ್ಯೋಗ ವಾರ್ತೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆಫ್‌ಲೈನ್ ಮೂಲಕ ಅಪ್ಲೈ ಮಾಡಿ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆಫ್‌ಲೈನ್ ಮೂಲಕ ಅಪ್ಲೈ ಮಾಡಿ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ (DCC) ಖಾಲಿ ಇರುವ 15 ಪೌರಕಾರ್ಮಿಕರ (Civil Servants) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಹುದ್ದೆಗಳ ವಿವರ:

ಒಟ್ಟು ಹುದ್ದೆಗಳು: 15

ಹುದ್ದೆಯ ಹೆಸರು:

ಪೌರಕಾರ್ಮಿಕರು (Civil Servants)

ವೇತನ ಶ್ರೇಣಿ:

ತಿಂಗಳಿಗೆ ರೂ. 27,000 ರಿಂದ ರೂ. 46,675 ವರೆಗೆ.

ಅರ್ಹತೆಗಳು:

ವಯೋಮಿತಿ:

ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು.

ಅನುಭವ:

ದಾವಣಗೆರೆ ಪಾಲಿಕೆಯಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.

ಭಾಷೆ: ಕನ್ನಡ ಭಾಷಾ ಜ್ಞಾನ ಕಡ್ಡಾಯ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ವಯಸ್ಸಿನ ಪುರಾವೆ, ಅನುಭವದ ಪತ್ರ ಇತ್ಯಾದಿ) ದಾವಣಗೆರೆ ಮಹಾನಗರ ಪಾಲಿಕೆಯ ಕಚೇರಿಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಆಯುಕ್ತರು, ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ರೈಲ್ವೆ ನಿಲ್ದಾಣದ ಎದುರು, ಪಿ.ಬಿ. ರಸ್ತೆ, ದಾವಣಗೆರೆ – 577002.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ: 18 ಫೆಬ್ರವರಿ 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಮಾರ್ಚ್ 2026

Official Website: davanagerecity.mrc.gov.in

Share

Leave a comment

Leave a Reply

Your email address will not be published. Required fields are marked *

Related Articles