Home ಕ್ರೈಂ ನ್ಯೂಸ್ NCERT ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ವಿಷಯ ಅಳವಡಿಕೆ: ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

NCERT ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ವಿಷಯ ಅಳವಡಿಕೆ: ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ!

Share
ನರೇಂದ್ರ ಮೋದಿ
Share

ನವದೆಹಲಿ: ಎನ್‌ಸಿಇಆರ್‌ಟಿ (NCERT) 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯವನ್ನು ಸೇರಿಸಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಪ್ರಧಾನಿಯವರು, “ಎಳೆಯ ವಯಸ್ಸಿನ ಮಕ್ಕಳಿಗೆ ಇಂತಹ ಸೂಕ್ಷ್ಮ ವಿಷಯಗಳನ್ನು ಬೋಧಿಸುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದ್ದಾರೆ.

ಈ ಪಠ್ಯದಲ್ಲಿ ನ್ಯಾಯಾಂಗ ವ್ಯವಸ್ಥೆಯ ಸವಾಲುಗಳ ಅಡಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಲಾಗಿತ್ತು. ಇದು ನ್ಯಾಯಾಂಗದ ಘನತೆಗೆ ಧಕ್ಕೆ ತರುವ ಪ್ರಯತ್ನ ಎಂದು ಸುಪ್ರೀಂ ಕೋರ್ಟ್ ಕೂಡ ಆಕ್ರೋಶ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ಕುರಿತು ಸ್ವಯಂ ಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದು, ಪಠ್ಯಪುಸ್ತಕದ ಮಾರಾಟ ಮತ್ತು ವಿತರಣೆಗೆ ಸಂಪೂರ್ಣ ನಿಷೇಧ
ಹೇರಿದೆ.

ಸರ್ಕಾರದ ಪ್ರತಿಕ್ರಿಯೆ:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ನ್ಯಾಯಾಂಗದ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದು ತಿಳಿಸಿದ್ದಾರೆ. ಪಠ್ಯ ಸಿದ್ಧಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಈ ವಿವಾದಿತ ಭಾಗವನ್ನು ತೆಗೆದುಹಾಕಿ ಪಠ್ಯವನ್ನು ಮರುಪರಿಶೀಲಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಈಗಾಗಲೇ ಮುದ್ರಣಗೊಂಡಿದ್ದ ಲಕ್ಷಾಂತರ ಪ್ರತಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಎನ್‌ಸಿಇಆರ್‌ಟಿ ನಿರ್ಧರಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles