Home ದಾವಣಗೆರೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ನಲ್ಲಿ ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ: ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ!
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ನಲ್ಲಿ ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ: ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಜನಸಂಖ್ಯೆಯ ಆಧಾರ

ಹರಿಹರ ತಾಲೂಕಿನ ವಾಲ್ಮೀಕಿ ಪೀಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವ ವಿಧಾನಸಭಾ ಕ್ಷೇತ್ರಕ್ಕೆ ಹೋಲಿಸಿದರೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇದೆ. ಹಾಗಾಗಿ, ಟಿಕೆಟ್ ಅನ್ನು ಅಲ್ಪಸಂಖ್ಯಾತರು ಬೇಡುತ್ತಿದ್ದಾರೆ. ಇದರಲ್ಲಿ ತಪ್ಪೇನಿಲ್ಲ ಎಂಬುದು ನನ್ನ ಭಾವನೆ. ಪಕ್ಷ ಎಲ್ಲವನ್ನೂ ತೀರ್ಮಾನಿಸುತ್ತದೆ. ಟಿಕೆಟ್ ಯಾರಿಗೆ ನೀಡಿದರೂ ಗೆಲುವಿಗೆ ನಾವು ಶ್ರಮಿಸುತ್ತೇವೆ ಎಂದು ತಿಳಿಸಿದರು.

ಅಬ್ದುಲ್ ಜಬ್ಬಾರ್ ಅವರ ಬೇಡಿಕೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಟಿಕೆಟ್ ಕೇಳಿದ್ದಾರೆ. ಅಹಿಂದ ವರ್ಗಕ್ಕಾದರೂ ನೀಡಬೇಕೆಂದಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ಪರಿಶೀಲಿಸುತ್ತದೆ ಮತ್ತು ಗಣನೆಗೆ ತೆಗೆದುಕೊಳ್ಳುತ್ತದೆ ಎಂದರು.

ಅಹಿಂದ ವರ್ಗಕ್ಕೆ ಆದ್ಯತೆ:

ಈಗಾಗಲೇ ಬಾಗಲಕೋಟೆಯಲ್ಲಿ ಅಹಿಂದ ವರ್ಗಕ್ಕೆ ಟಿಕೆಟ್ ನೀಡುವುದು ಖಚಿತ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಟಿಕೆಟ್ ಕೊಟ್ಟ ಮೇಲೆಯೇ ಖಚಿತವಾಗಲಿದೆ. ಯಾರಿಗೆ ಕೊಡುತ್ತಾರೆ ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ತಲೆಬಾಗಲೇಬೇಕು, ಒಪ್ಪಿಕೊಳ್ಳಲೇಬೇಕು ಎಂದು ಹೇಳಿದರು.

ಬೈ ಎಲೆಕ್ಷನ್ ನಲ್ಲಿ ಯಾವ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಹೈಕಮಾಂಡ್ ಯಾವ ರೀತಿ ನಿರ್ಧಾರ ಮಾಡುತ್ತದೆಯೋ ಗೊತ್ತಿಲ್ಲ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಯಾರಿಗೆ ಟಿಕೆಟ್ ನೀಡಿದರೂ ಗೆಲುವಿಗೆ ಶ್ರಮಿಸುವುದಷ್ಟೇ ನಮ್ಮ ಕೆಲಸ. ಅಬ್ದುಲ್ ಜಬ್ಬಾರ್ ಮಾತ್ರವಲ್ಲ, ಬೇರೆಯವರೂ ಟಿಕೆಟ್ ಕೇಳಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles