ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಉದಯ್ ಭಾನು ಚಿಬ್ ಗೆ ಅಭಿನಂದನೆ: ದೇಶದ ಯುವಕರು ಕಾಂಗ್ರೆಸ್ ನತ್ತ ಆಕರ್ಷಿತ ಖುಷಿ ವಿಚಾರ ಎಂದ್ರು ಸೈಯದ್ ಖಾಲಿದ್ ಅಹ್ಮದ್

On: October 4, 2024 6:32 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-10-2024

ದಾವಣಗೆರೆ: ಅಖಿಲ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾದ ಉದಯ್ ಭಾನು ಚಿಬ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸೈಯದ್ ಖಾಲಿದ್ ಅಹ್ಮದ್ ಅವರು, ದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಜನರ ಒಲವು ವ್ಯಕ್ತವಾಗುತ್ತಿದೆ. ಯುವಕರು ಸಹ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಆಕರ್ಷಿತರಾಗುತ್ತಿದ್ದಾರೆ. ಭಾರತ್ ಜೊಡೋ ಯಾತ್ರೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಒಲವು ತೋರಿರುವ ದೇಶದ ಜನರು ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಆಶಯ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದತ್ತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಖಾಲಿದ್ ಅಹ್ಮದ್ ಅವರು ಸಂತಸ ವ್ಯಕ್ತಪಡಿಸಿದರು.

ಇಂಡಿಯನ್ ಯೂತ್ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಉದಯ್ ಭಾನು ಚಿಬ್ ಅವರ ನೇಮಕದಿಂದ ಯುವ ರಾಜಕಾರಣದಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಯುವಕರ ಸಂಘಟನೆಯತ್ತ ಹೆಚ್ಚಿನ ಒತ್ತು ನೀಡುವ ಗುರಿ ಹೊಂದಿರುವ ಉದಯ್ ಭಾನು ಚಿಬ್ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಕಾಂಗ್ರೆಸ್ ಮತ್ತಷ್ಟು ಬಲಿಷ್ಠಗೊಳಿಸೋಣ. ಯುವಕರಲ್ಲಿ ವಿಷ ಬೀಜ ಬಿತ್ತುತ್ತಿರುವವರ ಕುರಿತು ಜಾಗೃತಿ ಮೂಡಿಸೋಣ ಎಂದು ಖಾಲಿದ್ ಅಹ್ಮದ್ ಅವರು ಹೇಳಿದರು.

ಜನರ ಜನಾದೇಶ ಪಡೆದು ಅಧಿಕಾರಕ್ಕೆ ಬಂದಿರುವ ರಾಜ್ಯಗಳ ಸರ್ಕಾರ ಪತನಕ್ಕೆ ಪಿತೂರಿ ನಡೆಸಲಾಗುತ್ತಿದೆ. ಈ ಪಿತೂರಿ ವಿರುದ್ಧ ಹೋರಾಡಬೇಕಿದೆ. ಕೇಂದ್ರ ಸರ್ಕಾರವು ಜನರ ತೀರ್ಪಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಬಂಧಿಸಿ ದ್ವೇಷ ರಾಜಕಾರಣಕ್ಕೆ ನಾಂದಿ ಹಾಡಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿಯೂ ಇಂಥ ದುರುದ್ದೇಶಪೂರ್ವಕ ಮುಡಾ ಕೇಸ್ ನಲ್ಲಿ ವಿನಾಕಾರಣ ಸಿಎಂ ಸಿದ್ದರಾಮಯ್ಯರ ಮೇಲೆ ಆರೋಪ ಮಾಡಲಾಗುತ್ತಿದೆ. ಐದು ಗ್ಯಾರಂಟಿಗಳನ್ನು ನೀಡಿ ಜನಪ್ರಿಯ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿದ್ದರಾಮಯ್ಯರ ಇಮೇಜ್, ಜನಪ್ರಿಯತೆಗೆ ಧಕ್ಕೆ ತರುವ ಬೆಳವಣಿಗೆಗಳು ನಡೆಯುತ್ತಿವೆ. ಇಂಥ ಷಡ್ಯಂತ್ರದ ಬಗ್ಗೆ ಜನರಿಗೆ ಹಾಗೂ ವಿಶೇಷವಾಗಿ ಯುವಕರಿಗೆ ತಿಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು. 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment