Home ಕ್ರೈಂ ನ್ಯೂಸ್ ದಾವಣಗೆರೆ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯಿಂದ ಬಂದೂಕು ತರಬೇತಿ ಶಿಬಿರ, ಅರ್ಜಿ ಆಹ್ವಾನ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯಿಂದ ಬಂದೂಕು ತರಬೇತಿ ಶಿಬಿರ, ಅರ್ಜಿ ಆಹ್ವಾನ

Share
ದಾವಣಗೆರೆ
Share

ದಾವಣಗೆರೆ: ಜಿಲ್ಲಾ ಪೊಲೀಸ್ ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಆತ್ಮರಕ್ಷಣೆ ಮತ್ತು ಬಂದೂಕು ಬಳಕೆಯ ಬಗ್ಗೆ ಶಿಸ್ತುಬದ್ಧ ತರಬೇತಿ ನೀಡಲು ‘ನಾಗರೀಕ ಬಂದೂಕು ತರಬೇತಿ ಶಿಬಿರ‘ವನ್ನು ಆಯೋಜಿಸಲಾಗಿದೆ.

ಮಾರ್ಚ್-2026 ರ ಮಾಹೆಯಲ್ಲಿ ದಾವಣಗೆರೆಯ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (DAR) ಕವಾಯತು ಮೈದಾನದಲ್ಲಿ ಈ ಶಿಬಿರ ನಡೆಯಲಿದೆ. ಜಿಲ್ಲೆಯ ಆಸಕ್ತ ನಾಗರೀಕರು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಸಾರ್ವಜನಿಕರು ತಮ್ಮ ಹತ್ತಿರದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಿ ಲಿಖಿತ ಮನವಿಯನ್ನು ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ಪೂರಕ ದಾಖಲೆಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ಠಾಣಾ ಹಂತದಲ್ಲಿ ಪರಿಶೀಲನೆ ಮುಗಿದ ನಂತರ, ಪರಿಶೀಲನಾ ವರದಿಯೊಂದಿಗೆ ಅರ್ಜಿಗಳನ್ನು ಪೊಲೀಸ್ ಉಪಾಧೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಪಿ.ಜೆ ಬಡಾವಣೆ, ದಾವಣಗೆರೆ ಇವರ ಕಚೇರಿಗೆ ತಲುಪಿಸಬೇಕು.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ದಿನಾಂಕ: 15-03-2026 ಕೊನೆಯ ದಿನವಾಗಿದ್ದು, ನಿಗದಿತ ಅವಧಿಯ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಹೆಚ್ಚಿನ ಮಾಹಿತಿಗಾಗಿ:

ಶಿಬಿರದ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08192-272005 ಅನ್ನು ಸಂಪರ್ಕಿಸಬಹುದಾಗಿದೆ.

Share

Leave a comment

Leave a Reply

Your email address will not be published. Required fields are marked *