Home ಉದ್ಯೋಗ ವಾರ್ತೆ ದಾವಣಗೆರೆ: ಬ್ಯಾಡ್ಮಿಂಟನ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ದಾವಣಗೆರೆ: ಬ್ಯಾಡ್ಮಿಂಟನ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನ

Share
ದಾವಣಗೆರೆ
Share

ದಾವಣಗೆರೆ: ನಗರದ ಶ್ರೀನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಖಾಲಿ ಇರುವ ಷಟಲ್ ಬ್ಯಾಡ್ಮಿಂಟನ್ ತರಬೇತುದಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಈ ನೇಮಕಾತಿ ನಡೆಯುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ನುರಿತ ತರಬೇತುದಾರರು ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಾರ್ಯಾಲಯದಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 16ರ ಒಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Recent Posts

Recent Comments

No comments to show.
Related Articles