ಬೆಂಗಳೂರು: ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಘಟನಾ ಚಾತುರ್ಯ:
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ
ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಹೇಳಿದ್ದಾರೆ.
ಪಕ್ಷನಿಷ್ಠೆ:
ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದು ತಿಳಿಸಿದ್ದಾರೆ.
ಉಜ್ವಲ ಭವಿಷ್ಯ:
ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.





Leave a comment