ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆ ಜಿಲ್ಲೆ ಬರಪೀಡಿತ ಘೋಷಣೆ? ಒಂದು ವಾರದ ಬಳಿಕ ಗೊತ್ತಾಗುತ್ತೆ…!

On: August 16, 2023 1:06 PM
Follow Us:
Drought
---Advertisement---

SUDDIKSHANA KANNADA NEWS/ DAVANAGERE/ DATE:16-08-2023

ದಾವಣಗೆರೆ (Davanagere): ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದಾವಣಗೆರೆ ಜಿಲ್ಲೆಯಲ್ಲಿ ಮಳೆ (Rain) ಕಡಿಮೆಯಾಗಿದೆ. ಮೇ, ಜೂನ್, ಜುಲೈ, ಆಗಸ್ಟ್ ತಿಂಗಳಿನಲ್ಲಿ 2022ರಲ್ಲಿ ವರುಣ (Rain) ಅಬ್ಬರಿಸಿ ಬೊಬ್ಬಿರಿದಿದ್ದ. ಸೆಪ್ಟಂಬರ್ ಹಾಗೂ ಅಕ್ಟೋಬರ್ ನಲ್ಲಿಯೂ ತನ್ನ ಪ್ರತಾಪ ತೋರಿಸಿತ್ತು. ಆದ್ರೆ, ಈ ಬಾರಿ ಕೇವಲ ಜುಲೈ ತಿಂಗಳಿನಲ್ಲಿ ಮಾತ್ರ ಉತ್ತಮ ಮಳೆ(Rain)ಯಾಗಿದೆ. ಉಳಿದಂತೆ ಮಳೆ (Rain) ಆಗಿದ್ದೇ ಕಡಿಮೆ. ವಾಡಿಕೆ ಮಳೆಗಿಂತ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕೆಲವೆಡೆ ಈಗಾಗಲೇ ಬೆಳೆ ಒಣಗಿ ಹೋಗಿವೆ.ಕೃಷಿಗೆ ನೀರು ಸಿಗುತ್ತಿಲ್ಲ. ಹಾಗಾಗಿ, ದಾವಣಗೆರೆ (Davanagere) ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ಈ ಸುದ್ದಿಯನ್ನೂ ಓದಿ: 

Bhadra Dam: ಭದ್ರಾ ಡ್ಯಾಂ ನೀರು ಹರಿಸುವಿಕೆ ಪುನರ್ ಪರಿಶೀಲಿಸುವಂತೆ ಒತ್ತಾಯವೇಕೆ..? ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜಪ್ಪರು ಸಚಿವರಿಗೆ ಕೊಟ್ಟ ಮಾಹಿತಿಯೇನು..?

ಇದಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಮುನ್ಸೂಚನೆ ನೀಡಿದ್ದಾರೆ. ಮುಂದಿನ ವಾರ ಸಚಿವ ಸಂಪುಟ ಸಭೆ ಇದೆ. ಅಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಜಿಲ್ಲೆಯಲ್ಲಿ ಸುರಿದಿರುವ ಮಳೆ ಕುರಿತಂತೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ. ಎಲ್ಲೆಲ್ಲಿ ಮಳೆ ಕಡಿಮೆಯಾಗಿದೆ, ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು, ಅಂಕಿ ಅಂಶಗಳನ್ನು ನೀಡುವಂತೆ ಸೂಚನೆ ನೀಡಿದ್ದಾರೆ. ಸಂಪೂರ್ಣ ಮಾಹಿತಿ ಪಡೆದು ಯಾವ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಬೇಕೆಂಬ ಬಗ್ಗೆ ನಿರ್ಧರಿಸಲಾಗುತ್ತದೆ.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಇದೇ ಪರಿಸ್ಥಿತಿ ಇದ್ದರೆ ದಾವಣಗೆರೆ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಲಾಗುತ್ತದೆ. ಒಟ್ಟಿನಲ್ಲಿ ಒಂದು ವಾರದ ಬಳಿಕ ಈ ಕುರಿತಂತೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಜುಲೈ ತಿಂಗಳಿನಲ್ಲಿ ಮುಂಗಾರು ಹಂಗಾಮಿನಲ್ಲಿ ಸರಾಸರಿ 205 ಮೀ.ಮೀ ಮಳೆ ಇದ್ದು, ವಾಸ್ತವಿಕವಾಗಿ 221 ಮಿ.ಮೀ ಮಳೆ ಆಗಿದ್ದು ಶೇ.8 ರಷ್ಟು ಹೆಚ್ಚು ಮಳೆಯಾಗಿದೆ. ಒಟ್ಟಾರೆ ಗಮನಿಸಿದರೆ ಮಳೆ ಕಡಿಮೆಯಾಗಿದೆ.

ತೋಟಗಾರಿಕೆಯಲ್ಲಿ ದಾವಣಗೆರೆ ಮುಂಚೂಣಿ:

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ನೊಂದಣಿ ಮಾಡಿಕೊಂಡ ಜಿಲ್ಲೆಯ ರೈತರಿಗೆ ಪ್ರತಿ ಕಂತಿಗೆ ರೂ.2,000 ರಂತೆ ಒಟ್ಟು ರೂ. 470.03 ಕೋಟಿ ಮೊತ್ತ ರೈತರ ಖಾತೆಗೆ ಬಂದಿರುತ್ತದೆ. ತೋಟಗಾರಿಕೆಯಲ್ಲಿ
ಮುಂಚೂಣಿ ಜಿಲ್ಲೆಯಾಗಿದ್ದು, ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ.

ತೋಟಗಾರಿಕೆಯನ್ನು ಪ್ರೋತ್ಸಾಹಿಸಲು ಇಲಾಖೆಯ ಮೂಲಕ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಇತರೆ ಯೋಜನೆಗಳ ಮೂಲಕ ತೋಟಗಾರಿಕೆಯಲ್ಲಿ
ತೊಡಗಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment