Home ದಾವಣಗೆರೆ ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿ-ಫಾರಂ ಸಿಗುವ ಮೊದಲೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿ-ಫಾರಂ ಸಿಗುವ ಮೊದಲೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭೆಯ ಉಪಚುನಾವಣಾ ಕಣ ರಂಗೇರತೊಡಗಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಮೂರು ದಿನಗಳ ಬಾಕಿ ಉಳಿದಿರುವಂತೆ ಕಾಂಗ್ರೆಸ್ ಬಿ ಫಾರಂ ಸಿಗದಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ರ ಪುತ್ರ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದರು.

ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪರ ನಿಧನದ ಬಳಿಕ ಸಮರ್ಥ್ ಶಾಮನೂರು ಹೆಸರು ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಬಲವಾಗಿ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡದಿದ್ದರೂ ಸಮರ್ಥ್ ಶಾಮನೂರು ಅವರು ತಾಯಿ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಮಾರ್ಚ್ 23ರ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿರುವ ಸಮರ್ಥ್ ಶಾಮನೂರು ಇಂದು ಸಾಂಕೇತಿಕವಾಗಿ ಎರಡು ಸೆಟ್ ಒಳಗೊಂಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮಾತ್ರವಲ್ಲ, ಅಲ್ಪಸಂಖ್ಯಾತರಿಗೆ ಈ ಬಾರಿ ಟಿಕೆಟ್ ನೀಡಬೇಕೆಂಬ ಕೂಗು ಬಲವಾಗಿ ಕೇಳಿ ಬಂದರೂ ಸಮರ್ಥ್ ಶಾಮನೂರು ಅವರು ನಾಮಪತ್ರ ಸಲ್ಲಿಸುವ ಮೂಲಕ ಅಖಾಡದಲ್ಲಿ ಇರುವುದಾಗಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಹಾಗೂ ಸಮರ್ಥ್ ನಡುವೆ ಭಾರೀ ಪೈಪೋಟಿ ಏರ್ಪಡಲಿದೆ. ಸಮರ್ಥ್ ಶಾಮನೂರು ಅವರಿಗೆ ಬಹುತೇಕ ಕಾಂಗ್ರೆಸ್ ಟಿಕೆಟ್ ಸಿಗಬಹುದು ಎಂಬುದು ಈ ಮೂಲಕ ಸ್ಪಷ್ಟವಾಗಿದೆ.

Share

Leave a comment

Leave a Reply

Your email address will not be published. Required fields are marked *