SUDDIKSHANA KANNADA NEWS/ DAVANAGERE/ DATE:11-10-2024
ಕಾನ್ಪುರ: ಕಾನ್ಪುರದ ಐಐಟಿಯಲ್ಲಿ 28 ವರ್ಷದ ಪಿಹೆಡ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷದಲ್ಲಿ ಇದು ನಾಲ್ಕನೇ ಆತ್ಮಹತ್ಯೆ ಪ್ರಕರಣವಾಗಿದೆ.
ಹಾಸ್ಟೆಲ್ಗೆ ತಲುಪಿದಾಗ ವಿದ್ಯಾರ್ಥಿನಿಯ ಕೊಠಡಿಗೆ ಬೀಗ ಹಾಕಿರುವುದು ಕಂಡು ಬಂದಿದ್ದು, ಕೊಠಡಿಯ ಬಾಗಿಲು ಒಡೆದ ಬಳಿಕ ಆಕೆಯ ಶವ ಪತ್ತೆಯಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ 28 ವರ್ಷದ ಪಿಎಚ್ಡಿ ವಿದ್ಯಾರ್ಥಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷದಲ್ಲಿ ಇದು ನಾಲ್ಕನೇ ಘಟನೆಯಾಗಿದೆ. ಭೂ ವಿಜ್ಞಾನದಲ್ಲಿ ಪಿಎಚ್ಡಿ ಓದುತ್ತಿದ್ದಳು ಮತ್ತು ಮಧ್ಯರಾತ್ರಿಯ ಸಮಯದಲ್ಲಿ ಹಾಲ್ ಸಂಖ್ಯೆ -4 ರಲ್ಲಿ ತನ್ನ ಹಾಸ್ಟೆಲ್ ರೂಮ್ ಡಿ -116 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಫೋರೆನ್ಸಿಕ್ ತಂಡವು ಕ್ಯಾಂಪಸ್ಗೆ ಭೇಟಿ ನೀಡಿದೆ. ಈ ಸಂಬಂಧ ವರದಿ ಬರಬೇಕಿದ್ದು, ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಭರವಸೆಯ ಸಂಶೋಧಕಿಯನ್ನು ಕಳೆದುಕೊಂಡಂತಾಗಿದ್ದು, ಆತ್ಮಹತ್ಯೆ ಪ್ರಕರಣ ವಿದ್ಯಾರ್ಥಿನಿಯರಲ್ಲಿ ಆತಂಕ ಮೂಡಿಸಿದೆ.
ಮೃತಳ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಐಐಟಿ ಸಂತಾಪ ಸೂಚಿಸಿದೆ.
ಘಟನಾ ಸ್ಥಳದಲ್ಲಿ ವಿದ್ಯಾರ್ಥಿನಿ ತನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವ ಚೀಟಿ ಪತ್ತೆಯಾಗಿದೆ. ಆತ್ಮಹತ್ಯೆಯ ಹಿಂದಿನ ರಹಸ್ಯವನ್ನು ಭೇದಿಸಲು ಪೊಲೀಸರಿಗೆ ಸಹಾಯ ಮಾಡುವ ಮೊಬೈಲ್ ಫೋನ್ ಅನ್ನು ಹಾಸ್ಟೆಲ್ ಕೊಠಡಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
28ರ ಹರೆಯದ ಅವರು ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜಿನಲ್ಲಿ ಬಿಎಸ್ಸಿ ಮತ್ತು ಝಾನ್ಸಿಯ ಬುಂದೇಲ್ಖಂಡ್ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಪೂರ್ಣಗೊಳಿಸಿದ್ದರು.