Home ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕರೆ
ದಾವಣಗೆರೆಬೆಂಗಳೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕರೆ

Share
ಡಾ. ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ: ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರೊಂದಿಗೆ ದಾವಣಗೆರೆ ಗೃಹ ಕಚೇರಿಯಲ್ಲಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಕಾಂಗ್ರೆಸ್ ಪಕ್ಷ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಜನಜೀವನವನ್ನು ಸುಧಾರಿಸಿದ್ದು, ಜನರಿಗೆ ಬದುಕಿನ ಭದ್ರತೆ ನೀಡಿವೆ ಎಂದು ತಿಳಿಸಿದರು.

ಪಕ್ಷದ ಆಡಳಿತಕ್ಕೆ ಜನಮೆಚ್ಚುಗೆ ದೊರೆತಿರುವುದರಿಂದ, ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜನರ ಬೆಂಬಲ ಅಗತ್ಯವಿದೆ. ಸಮೀಪಿಸುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಸೇರಿದಂತೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *