SUDDIKSHANA KANNADA NEWS/ DAVANAGERE/ DATE:13-10-2024
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರ ದಿಕ್ಕೆಟ್ಟ ನೀತಿಗಳು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮರಣಶಾಸನಗಳಾಗಿವೆ. ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲದಿದ್ದರಿಂದ ಸಹಾಯಕಿಯರು ಸಾವಿನ ಬಾಗಿಲು ಬಡಿಯುವಂತಾಗಿದೆ! ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
3-4 ತಿಂಗಳಿಂದ ಅಂಗನವಾಡಿ ಸಿಬ್ಬಂದಿಗೆ ಸಿದ್ದರಾಮಯ್ಯರ ಸರ್ಕಾರವು ಸಂಬಳ ನೀಡಿಲ್ಲ. ದಾವಣಗೆರೆಯಲ್ಲಿ ಅಂಗನವಾಡಿ ಸಹಾಯಕಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಇದಕ್ಕಿಂತ ಸಾಕ್ಷಿ ಬೇಕಾ ಎಂದು ಸಾಮಾಜಿಕ
ಮಾಧ್ಯಮಗಳಲ್ಲಿ ಕಿಡಿಕಾರಿದ್ದಾರೆ.
ಸಂಬಳ ಬಾರದ ಕಾರಣಕ್ಕೆ ಸಂಕಷ್ಟಕ್ಕೆ ಒಳಗಾಗಿರುವ ಅಂಗನವಾಡಿ ಸಹಾಯಕಿಯರು ಆತ್ಮಹತ್ಯೆ ಹಾದಿ ಹಿಡಿಯುತ್ತಿರುವುದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿರುವ ಭ್ರಷ್ಟ ಸಿದ್ದರಾಮಯ್ಯನವರೇ, ಹೊಣೆಗಾರಿಕೆ ಮರೆತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ನೊಂದ ಅಂಗನವಾಡಿ ಸಿಬ್ಬಂದಿಗೆ ಸಕಾಲದಲ್ಲಿ ಸಂಬಳ ನೀಡಿ, ಇಲ್ಲವೇ ಕುರ್ಚಿ
ಬಿಟ್ಟು ತೊಲಗಿ ಎಂದು ಕಿಡಿಕಾರಿದ್ದಾರೆ.